ಗ್ರಾಮ ಪಂಚಾಯಿತಿ ಚುನಾವಣೆ; ಮೂರು ವಾರದಲ್ಲಿ ದಿನಾಂಕ ನಿಗದಿಗೆ ಹೈಕೋರ್ಟ್ ಸೂಚನೆ


ಬೆಂಗಳೂರು ನ 13:ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಅಂತಿಮ ದಿನಾಂಕವನ್ನು ಇನ್ನು ಮೂರು ವಾರಗಳಲ್ಲಿ ಪ್ರಕಟಿಸುವಂತೆ ಹೈಕೋರ್ಟ್ ಹೇಳಿದೆ.


ಇನ್ನು ಮೂರು ವಾರಗಳಲ್ಲಿ ಚುನಾವಣಾ ದಿನಾಂಕ ನಿಗದಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.ಚುನಾವಣೆ ನಡೆಸಲು ಅಗತ್ಯ ಪ್ರಮಾಣದಲ್ಲಿ ಸಿಬ್ಬಂದಿಯ ಅಗತ್ಯವಿದ್ದರೆ ರಾಜ್ಯ ಚುನಾವಣಾ ಆಯೋಗವು ರಾಜ್ಯಪಾಲರನ್ನು ಸಂಪರ್ಕಿಸಬಹುದು. ಆದರೆ ರಾಜ್ಯ ಸರ್ಕಾರವನ್ನಲ್ಲ ಎಂದು ಹೈಕೋರ್ಟ್ ಹೇಳಿದೆ

ಕೊರೊನಾ ವೈರಸ್ ಸೋಂಕು ಹರಡುತ್ತಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಅನಿರ್ದಿಷ್ಟಾವಧಿ ಮುಂದೂಡುವಂತೆ ಈ ಹಿಂದೆ ಸರ್ಕಾರ ಕೇಳಿಕೊಂಡಿತ್ತು. ವಿಧಾನಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗಳು ನಡೆಯುತ್ತಿರುವಾಗ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಏನು ಕಷ್ಟ ಎಂದು ಹೈಕೋರ್ಟ್ ಪ್ರಶ್ನಿಸಿ ಮೂರು ವಾರಗಳಲ್ಲಿ ಚುನಾವಣಾ ದಿನಾಂಕ ನಿಗದಿಮಾಡಿ ಚುನಾವಣೆ ನಡೆಸುವಂತೆ ಸೂಚಿಸಿದೆ

ಪ್ರಕರಣಗಳು ಕಡಿಮೆ ಇರುವ ಜಿಲ್ಲೆಗಳಲ್ಲಿ ಹಂತಹಂತವಾಗಿ ಚುನಾವಣೆ ನಡೆಸಬಹುದು. ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಅವರಿದ್ದ ವಿಭಾಗೀಯ ಪೀಠ ಹೇಳಿದೆ