ಗ್ರಾಹಕರು ಜಾಗರೂಕತೆಯಿಂದ ವ್ಯವಹರಿಸಿ: ಸಂತೋಷ ಕುಂದರ್

ಸಂಜೆವಾಣಿ ವಾರ್ತೆ,
ವಿಜಯಪುರ, ಮಾ.16: ಇ- ಕಾಮರ್ಸ್‍ನಲ್ಲಿ ವ್ಯಾಪಾರ ವಹಿವಾಟು ಮಾಡುವ ಗ್ರಾಹಕರನ್ನು ಗುರಿಯಾಗಿಸಿಕೊಂಡು ಅಪರಿಚಿತ ವ್ಯಕ್ತಿಗಳು ಅವರ ಹಣವನ್ನು ಮೋಸದಿಂದ ಸೆಳೆಯುವ ಸಾಧ್ಯತೆ ಇದ್ದು ಗ್ರಾಹಕರು ತಮ್ಮ ವಹಿವಾಟಿನ ಸಮಯದಲ್ಲಿ ಅಪರಿಚಿತ ವ್ಯಕ್ತಿಗಳು ಕಳುಹಿಸಿದ ಸಂದೇಶಗಳನ್ನು ನಂಬಿ ಲಿಂಕ್ ಕ್ಲಿಕ್ ಅಥವಾ ವೈಯಕ್ತಿಕ ಮಾಹಿತಿಗಳನ್ನು ನೀಡದೇ ಗ್ರಾಹಕರು ಜಾಗರೂಕತೆಯಿಂದ ವ್ಯವಹರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಸಂತೋμï ಕುಂದರ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಆಹಾರ ಸುರಕ್ಷತಾ ಇಲಾಖೆ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ನ್ಯೂ ಸಂಸ್ಥೆ ಇವರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿಶ್ವ ಗ್ರಾಹಕರ ದಿನಾಚರಣೆ ಪ್ರಯುಕ್ತ ಗ್ರಾಹಕರಿಗೆ ನ್ಯಾಯಯುತ ಮತ್ತು ಜವಾಬ್ದಾರಿಯುತ ಕೃತಕ ಬುದ್ಧಿವಂತಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅನಾಮಧೇಯ ವ್ಯಕ್ತಿಗಳು ನಿಮ್ಮ ಮೊಬೈಲ್‍ಗೆ ಸಂದೇಶ ಕಳಿಸಿ, ಹಣ ಹೂಡಿದರೆ ದ್ವಿಗುಣವಾಗುತ್ತದೆ ಎಂದು ನಂಬಿಸುತ್ತಾರೆ. ಹಾಗೆ ನಿಮ್ಮ ಮೊಬೈಲ್‍ಗೆ ಓಟಿಪಿ ಬಂದಿದೆ ಎಂದು ನಬಿಸುತ್ತಾರೆ. ಯಾವುದೇ ಕಾರಣಕ್ಕೂ ಮತ್ತೊಬ್ಬರಿಗೆ ಓಟಿಪಿ ಹೇಳಬಾರದು. ಈ ತರಹ ಯಾವುದೇ ಕರೆ, ಸಂದೇಶ ಬಂದರೆ ಹತ್ತಿರದ ಸೈಬರ್ ಕ್ರೈಮ್ ಗೆ ದೂರು ನೀಡಬೇಕು. ರಾಷ್ಟ್ರೀಯ ಹೆಲ್ಪ್‍ಲೈನ್ 1930 ಕ್ಕೆ ಕರೆ ಮಾಡಿ ದೂರು ದಾಖಲಿಸಿದರೆ ತಕ್ಷಣವೇ ವರ್ಗಾವಣೆ ಆದ ಹಣವನ್ನು ಮರಳಿ ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ವಿಜಯಪುರ ಬಳಕೆದಾರರ ಸಂಘದ ಅಧ್ಯಕ್ಷ ಹಾಗೂ ನ್ಯಾಯವಾದಿ ಎಂ.ಜಿ. ಮಠಪತಿ ಉಪನ್ಯಾಸ ನೀಡಿ, ಆನಲೈನ್‍ನಲ್ಲಿ ವ್ಯವಹಾರ ಮಾಡುವಾಗ ಎಚ್ಚರಿಕೆ ಅಗತ್ಯವಾಗಿದೆ. ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನದ ಬಳಕೆ ಮಾಡುವಾಗ ಅದರ ಬಗ್ಗೆ ಮಾಹಿತಿ ಹೊಂದಿರುವುದು ಅವಶ್ಯಕತೆಯಾಗಿದೆ. ಜಾಲತಾಣದಲ್ಲಿ ಬರುವ ಮಾಹಿತಿಯನ್ನು ನಂಬಿ ವ್ಯವಹಾರ ಮಾಡಬಾರದು. ಕೂಲಂಕುಷವಾಗಿ ಪರಿಶೀಲಿಸಿ ಮುಂದುವರೆಯಬೇಕು ಎಂದರು.
ಜಿಲ್ಲಾ ಗ್ರಾಹಕರ ದೂರು ಪರಿಹಾರ ಆಯೋಗದ ಅಧ್ಯಕ್ಷ ಅಂಬಾದಾಸ ಕುಲಕರ್ಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯ ಮೇಲೆ ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗದ ಸದಸ್ಯೆ ವಿದ್ಯಾ ಗಲಗಲಿ, ಕಾನೂನು ಮಾಪನ ಶಾಸ್ತ್ರ ಸಹಾಯಕ ನಿರ್ದೇಶಕÀ ಶ್ರೀಕಾಂತ ಬುರಾಣಪುರ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕÀ ವಿನಯಕುಮಾರ ಪಾಟೀಲ, ಕೆ.ಎಫ್.ಸಿ. ಎಸ್.ಸಿ ನಿಗಮದ ಜಿಲ್ಲಾ ವ್ಯವಸ್ಥಾಪಕÀ ಡಿ. ಆರ್. ನಾಯ್ಕೋಡಿ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಹಾಗೂ ನ್ಯೂ ಸಂಸ್ಥೆಯ ಅಧ್ಯಕ್ಷÀ ಎಸ್.ಎಂ. ಕರೇಕಲ್ ಉಪಸ್ಥಿತರಿದ್ದರು.