ಗ್ರಾ.ಪಂಗೆ ಹೆಚ್ಚಿನ ಅಧಿಕಾರ: ಸಚಿವ ಕಪಿಲ್

ಬೆಂಗಳೂರು, ನ. ೯- ಗ್ರಾಮೀಣ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರ ನೀಡುವ ಮೂಲಕ ಗ್ರಾಮೀಣ ಭಾಗದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು
ಕೇಂದ್ರ ಪಂಚಾಯತ್ ರಾಜ್ ಖಾತೆ ರಾಜ್ಯಸಚಿವ ಕಪಿಲ್ ಮೋರೇಶ್ವರ್ ಪಾಟೀಲ್ ಹೇಳಿದರು.
ಬ್ಯಾಟರಾಯನಪುರ ಕ್ಷೇತ್ರದ ದೊಡ್ಡಜಾಲ ಗ್ರಾಮ ಪಂಚಾಯತಿ ಕಚೇರಿಗೆ ಸೋಮವಾರ ಭೇಟಿ ನೀಡಿ, ಪಂಚಾಯಿತಿ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಪ್ರತಿಯೊಂದು ಗ್ರಾಮವನ್ನು ಅಭಿವೃದ್ದಿ ಪಡಿಸುವ ಗುರಿಯನ್ನಿಟ್ಟುಕೊಂಡು ಅಧಿಕಾರ ವಿಕೇಂದ್ರೀಕರಣಕ್ಕೆ ಆದ್ಯತೆ ನೀಡಲಾಗಿದೆ ಎಂದರು.
೧೪ ಮತ್ತು ೧೫ನೇ ಹಣಕಾಸು ಆಯೋಗದ ಮೂಲಕ ಪಂಚಾಯಿತಿಗಳಿಗೆ ಹೆಚ್ಚಿನ ನೆರವು ನೀಡಲಾಗುತ್ತಿದೆ. ಕೇಂದ್ರದಿಂದ ಗ್ರಾಮೀಣಭಾಗಕ್ಕೆ ೬೪ ಯೋಜನೆಗಳನ್ನು ಜಾರಿಗೊಳಿಸಿದ್ದು, ಇದರ ಸದ್ಬಳಕೆ ಮಾಡಿಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು ಎಂದು ಸಲಹೆ ನೀಡಿದರು.
೧೩ನೇ ಹಣಕಾಸು ಆಯೋಗದಲ್ಲಿ ರೂ.೫೦ ಸಾವಿರ ಅನುದಾನ ನಿಗಧಿಯಾಗಿತ್ತು. ೧೫ನೇ ಹಣಕಾಸು ಆಯೋಗದಲ್ಲಿ ಪಂಚಾಯಿತಿಗಳಿಗೆ ಅನುದಾನವನ್ನು ೨.೩೬ ಲಕ್ಷ ಸಾವಿರ ಕೋಟಿ ರೂ.ಗೆ ಹೆಚ್ಚಿಸಲಾಗಿದ್ದು, ನೇರವಾಗಿ ಗ್ರಾಮಪಂಚಾಯಿತಿಗಳಿಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಹೇಳಿದರು.
ಇದೇ ವೇಳೆ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿ, ಪಂಚಾಯಿತಿ ವತಿಯಿಂದ ದೊಡ್ಡಜಾಲ ಗ್ರಾಮದಲ್ಲಿ ನಿರ್ಮಿಸಿರುವ ಡಿಜಿಟಲ್ ಗ್ರಂಥಾ ಲಯಕ್ಕೆ ಭೇಟಿನೀಡಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಸಾದಹಳ್ಳಿ ಗೇಟ್ ಬಳಿ “ನಮ್ಮ ಮೆಡಿಕಲ್ಸ್” ಔಷಧಿ ಅಂಗಡಿ, ನವರತ್ನ ಅಗ್ರಹಾರ ಗ್ರಾಮ ದಲ್ಲಿ ಉದ್ಯಮಿ ರೊನಾಲ್ಡ್ ಕೊಲಾಸೊ ನೀಡಿದ ದೇಣಿಗೆಯಿಂದ ನಿರ್ಮಿಸಿರುವ ಸರ್ಕಾರಿ ಶಾ ಲೆಗೆ ಭೇಟಿನೀಡಿ, ತರಗತಿ ಕೊಠಡಿ, ಸ್ಮಾರ್ಟ್ ಕೊಠಡಿ, ಡಿಜಿಟಲ್ ಗ್ರಂಥಾಲಯ, ಊಟದ ಹಾಲ್ ಸೇರಿದಂತೆ ವಿವಿಧ ವಿಭಾಗಗಳನ್ನು ವೀಕ್ಷಿಸಿದರು. ನಂತರ ಗ್ರಾಮದಲ್ಲಿ ಅಳವಡಿಸಿ ರುವ ವೈಫೈ ಸಂಕರ್ಪ, ಸಿಸಿ ಟಿವಿ, ನೀರಿನ ಮೀಟರ್ ಅಳವಡಿಕೆ, ಕೊಳಚೆನೀರು ಸಂಸ್ಕರಣಾ ಘಟಕ, ಈಜುಕೊಳ ಹಾಗೂ ಬ್ಯಾಡ್ಮಿಂಟನ್ ಕೋರ್ಟ್ ಸೌಲಭ್ಯಗಳನ್ನು ವೀಕ್ಷಿಸಿ, ಪ್ರಶಂಸೆ ವ್ಯಕ್ತಪಡಿಸಿದರು.
ಇದೇ ವೇಳೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಶಿಲ್ಪಾನಾಗ್, ಬೆಂಗಳೂರು ನಗರ ಜಿಲ್ಲಾಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಸಂಗಪ್ಪ, ತಾಲ್ಲೂಕು ಪಂ ಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಂ.ವೆಂಕಟೇಶ್, ಗ್ರಾಮಪಂಚಾಯಿತಿ ಅಧ್ಯಕ್ಷೆ ಹಂ ಸವೇಣ.ವಿ ಮಂಜುನಾಥ್, ಸದಸ್ಯ ಎನ್.ಕೆ.ಮಹೇಶ್ ಕುಮಾರ್, ಪಿಡಿಒ ಗಂಗಾರಾಮ್ ಸೇರಿ ಇನ್ನಿತರರು ಉಪಸ್ಥಿತರಿದ್ದರು.