ಗ್ರಾ ಪಂ.ಆರೋಗ್ಯ ಅಮೃತ ಅಭಿಯಾನಕ್ಕೆ ದದ್ದಲ್ ಚಾಲನೆ

ರಾಯಚೂರು, ನ.೨- ಕರ್ನಾಟಕ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್, ಜಿಲ್ಲಾ ಪಂಚಾಯತ,ತಾಲೂಕ ಪಂಚಾಯತ್ ಇವರ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಚಾಲನ ಮತ್ತು ತರಬೇತಿ ಕಾರ್ಯಕ್ರಮಕ್ಕೆ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಚಾಲನೆ ನೀಡಿ ಕಿಟ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಸಂತೋಷ್ ಕಾಮ ಗೌಡ, ತಹಸಿಲ್ದಾರ್ ಡಾ. ಹಂಪಣ್ಣ,ಜಿಲ್ಲಾ ಪಂಚಾಯತ್ ಯೋಜನ ನಿರ್ದೇಶಕ ಹಾಗೂ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ರಾಮರೆಡ್ಡಿ, ಜಯಂತ್ ರಾವ್ ಪತಂಗಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.