ಗ್ರಾ.ಪಂ.ಚುನಾವಣೆಯಲ್ಲಿ ಬಿಜೆಪಿ ಗರಿಷ್ಠ ಸ್ಥಾನಃ ಸಂತಸ ಕೋಚಬಾಳ

ವಿಜಯಪುರ, ಜ.1-ಜಿಲ್ಲೆಯಲ್ಲಿ ನಡೆದ ವಿವಿಧ ಗ್ರಾಮ ಪಂಚಾಯತಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಗರಿಷ್ಠ ಸ್ಥಾನ ಪಡೆದಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ್ ಕೋಚಬಾಳ ಅವರ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಪಕ್ಷವು ಗ್ರಾಮ ಸ್ವರಾಜ ಸಮಾವೇಶ ಪಂಚರತ್ನ ಸಮೀತಿ ರಚನೆ, ಭೂತ ಸಮೀತಿ ಮೂಲಕ ಪ್ರಯತ್ನ ಮಾಡಿತು. ಈ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಭಿವೃದ್ಧಿ ಕಾರ್ಯಗಳ ಮತ್ತು ಸಾಧನೆಯನ್ನು ಜನರಿಗೆ ತಿಳಿಸಿಸಲಾಗಿತ್ತು.
ಜನರು ಅಭಿವೃದ್ಧಿಯನ್ನು ಬೆಂಬಲಿಸಿ ಮತ ನೀಡಿ, ಬಿಜೆಪಿ ಬೆಂಬಲಿತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಮಾಡಿದ್ದಾರೆ. ಗೆಲವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳನ್ನು ಅಭಿನಂದಿಸಿದ ಅವರು ಈ ಅಭ್ಯರ್ಥಿಗಳನ್ನು ಬೆಂಬಲಿಸಿದ ಎಲ್ಲ ಮತದಾರರಿಗೂ, ಕಾರ್ಯಕರ್ತರಿಗು ಹಾಗೂ ಮುಖಂಡರಿಗೆ ಧನ್ಯವಾದ ಅರ್ಪಿಸಿದರು.