ಗ್ರಾ.ಪಂ ಚುನಾವಣೆ ನ.೧೭ ಡಿಸಿಗಳ ಸಭೆ

ಬೆಂಗಳೂರು, ನ. ೧೨-ಗ್ರಾಮಪಂಚಾಯಿತಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಮುಂದಾಗಿರುವ ರಾಜ್ಯ ಚುನಾವಣಾ ಆಯೋಗ ಈ ತಿಂಗಳ ೧೭ ರಂದು ಜಿಲ್ಲಾಧಿಕಾರಿಗಳ ಸಭೆ ಕರೆದಿದೆ. ಕೊರೊನಾ ಸೋಂಕಿನ ನಡುವೆ ಚುನಾವಣೆ ನಡೆಸಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಆಯೋಗ ಸಮಾಲೋಚನೆ ನಡೆಸಲಿದೆ.
ವಿಡಿಯೋಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳ ಜೊತೆ ಚುನಾವಣಾ ಆಯುಕ್ತರ ವಿಡಿಯೋ ಸಂವಾದ ನಡೆಸಲಿದೆ.
ಮುಕ್ತ ಹಾಗೂ ನ್ಯಾಯ ಸಮ್ಮತ ರೀತಿಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಎಲ್ಲ ರೀತಿಯ ತಯಾರಿ ನಡೆಸಿರುವ ರಾಜ್ಯ ಚುನಾವಣಾ ಆಯೋಗ,
ಚುನಾವಣೆ ಪೂರ್ವ ಸಿದ್ದತೆಗಳು, ಕೋವಿಡ್ ಪ್ರಸ್ತುತ ಪರಿಸ್ಥಿತಿ ಕುರಿತುಚರ್ಚೆ ನೆರೆ, ಪ್ರವಾಹ ಪರಿಸ್ಥಿತಿ ಹಿನ್ನಲೆ, ಮತಗಟ್ಟೆಗಳ ಸ್ಥಿತಿ ಮತ್ತು ಮತಗಟ್ಟೆ ಅಧಿಕಾರಿಗಳ ನೇಮಕ ಮತ್ತು ತರಬೇತಿ ಸೇರಿದಂತೆ ವಿದ್ಯುನ್ಮಾನ ಮತಯಂತ್ರ ಸಂಗ್ರಹಣೆ, ಹೀಗೆ ಹಲವು ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ನವಂಬರ್ ೧೭ ರಂದು ನಡೆಯಲಿರುವ ಸಭೆಯಲ್ಲಿ ಬೆಂಗಳೂರು, ಕಲ್ಬುರ್ಗಿ ವಿಭಾಗ, ಅದೇ ದಿನ ಬೆಳಗಾವಿ, ಮೈಸೂರು ವಿಭಾಗದ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯ ಚುನಾವಣಾ ಆಯುಕ್ತರು ಸಭೆ ನಡೆಸಿ ಗ್ರಾಮ ಪಂಚಾಯಿತಿಚುನಾವಣೆ ನಡೆಸಲುಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ರಾಜ್ಯ ಚುನಾವಣಾ ಆಯೋಗ ಅಧಿಕಾರಿಗಳಿಗೆ ನಿರ್ದೇಶನ ನೀಡಲಿದೆ.