ಗ್ರಾ.ಪಂ ಬಿಜೆಪಿ ಪಾಲು

ಔರಾದ :ಡಿ.31: ತಾಲ್ಲುಕಿನ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದಾರೆ. ಎಂದು ಪಶು ಸಂಗೋಪನಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಪ್ರಭು ಚವ್ಹಾಣ ಅವರು ತಿಳಿಸಿದ್ದಾರೆ.

ಔರಾದ ನಗರದ ಅಮರೇಶ್ವರ ಮಹಾವಿದ್ಯಾಲಯದಲ್ಲಿ ನಡೆದ ಮತ ಎಣಿಕೆ ನಡೆದು ಫಲಿತಾಂಶ ಹೊರಬಿದ್ದ ನಂತರ ಮಾನ್ಯ ಸಚಿವರು ಔರಾದ ಮತ್ತು ಕಮಲನಗರ ತಾಲೂಕಿನ 39 ಪಂಚಾಯಿತಿಗಳ ಪೈಕಿ 35 ರಲ್ಲಿ ನಾವೆ ಗೆದ್ದಿದ್ದೇವೆ ಎಂದು ತಿಳಿಸಿದ್ದಾರೆ. ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿರುವ ಸರ್ಕಾರ ವಿವಿಧ ಯೋಜನೆಗಳನ್ನು ಗ್ರಾಮ ಪಂಚಾಯ್ತಿಗಳ ಮೂಲಕ ಅನುಷ್ಠಾನಗೊಳಿಸುತ್ತಿದೆ. ಈ ಎಲ್ಲ ಯೋಜನೆಗಳು ಸೂಕ್ತ ಮತ್ತು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಸರ್ಕಾರದ ಸಾಧನೆ ಹಾಗೂ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ಜನತೆ ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ.