ಗ್ರಾ.ಪಂ. ಸದಸ್ಯರ ಮಹಾ ಒಕ್ಕೂಟದ ಜಿಲ್ಲಾ ಅಧ್ಯಕ್ಷರಾಗಿ ನಾಗರಾಜ ಬಾಣಾಪುರ ನೇಮಕ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ನ.29: ಕರ್ನಾಟಕ ರಾಜ್ಯ ಗ್ರಾಮ‌ ಪಂಚಾಯ್ತಿ ಸದಸ್ಯರ ಮಹಾ ಒಕ್ಕೂಟದ ಬಳ್ಳಾರಿ ಜಿಲ್ಲಾ ಅಧ್ಯಕ್ಷರನ್ನಾಗಿ ತಾಲೂಕಿನ  ವಣೇನೂರು ಗ್ರಾಮ ಪಂಚಾಯ್ತಿ ಸದಸ್ಯ ನಾಗರಾಜ ಬಾಣಾಪುರ ನೇಮಕಗೊಂಡಿದ್ದಾರೆ.
ಮಹಾ ಒಕ್ಕೂಟದ ರಾಜ್ಯ ಅಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್ ಅವರು ನಾಗರಾಜ್ ಇವರನ್ನು ನೇಮಕ‌ಮಾಡಿದ್ದಾರೆ.
ನೂತನ ಅಧ್ಯಕ್ಷರಾಗಿ ನೇಮಕವಾಗಿರುವ ನಾಗರಾಜ್ ಅವರು  ನಮ್ಮ ಜಿಲ್ಲೆಯ ಎಲ್ಲಾ ಜಿಲ್ಲಾ ಮತ್ತು ತಾಲೂಕು ಘಟಕದ ಪದಾದಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಗ್ರಾ.ಪಂ ಸದಸ್ಯರುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ.  ಗ್ರಾ.ಪಂ.ಗಳು ಸ್ಥಳೀಯ ಸರ್ಕಾರಗಳಾಗಿ ಕಾರ್ಯ ನಿರ್ವಹಿಸುವಂತಹ ವಾತಾವರಣವನ್ನು ಸೃಷ್ಟಿಮಾಡಿ ಒಕ್ಕೂಟವನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.