
ಬೀದರ್: ಮಾ.16:ವಿಶ್ವ ಗ್ಲಾಕೋಮಾ ದಿನದ ಅಂಗವಾಗಿ ಔರಾದ್ ತಾಲ್ಲೂಕಿನ ಸಂತಪುರ ಗ್ರಾಮದಲ್ಲಿ ನಡೆದ ಕಾಲ್ನಡಿಗೆ ಜಾಥಾ ಗ್ಲಾಕೋಮಾ ಜಾಗೃತಿ ಮೂಡಿಸಿತು.
ವೆಲ್‍ಮೆಗ್ನಾ ಗುಡ್ ನ್ಯೂಸ್ ಸೊಸೈಟಿ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಇಲಾಖೆ ಸಹಯೋಗದಲ್ಲಿ ಡಾ. ಸಾಲಿನ್ಸ್ ನೇತ್ರ ಆಸ್ಪತ್ರೆಯಿಂದ ಸಮುದಾಯ ಆರೋಗ್ಯ ಕೇಂದ್ರದ ವರೆಗೆ ಜಾಥಾ ನಡೆಯಿತು.
ಜಿಲ್ಲಾ ಅಂಧತ್ವ ನಿಯಂತ್ರಣ ಅಧಿಕಾರಿ ಡಾ. ಕಿರಣ ಪಾಟೀಲ ಜಾಥಾಕ್ಕೆ ಚಾಲನೆ ನೀಡಿದರು. ಡಾ. ಸಾಲಿನ್ಸ್ ನೇತ್ರ ಆಸ್ಪತ್ರೆಯ ಡಾ. ವೀರೇಂದ್ರ ಪಾಟೀಲ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಹುಲ್, ಕಾಶೀನಾಥ ಸ್ವಾಮಿ, ಅರ್ವಿನ್ ಜೋಶುವಾ, ಕಾರ್ಯಕ್ರಮ ಸಂಯೋಜಕ ಪುಟ್ಟರಾಜ ಬಲ್ಲೂರಕರ್ ಮೊದಲಾದವರು ಪಾಲ್ಗೊಂಡಿದ್ದರು.
ನಂತರ ಸಾಲಿನ್ಸ್ ನೇತ್ರ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ 60 ಜನರ ನೇತ್ರ ತಪಾಸಣೆ ಮಾಡಲಾಯಿತು. ಕಣ್ಣಿನ ಪೊರೆ ಇರುವ 10 ಜನರಿಗೆ ಉಚಿತ ಶಸ್ತ್ರಚಿಕಿತ್ಸೆಗಾಗಿ ಬೀದರ್‍ನ ಡಾ. ಸಾಲಿನ್ಸ್ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.