ಘೂಳನೂರ ಜಾತ್ರೋತ್ಸವ; ಜ.13ರಂದು ಮಂಗಲ ಭವನ ಉದ್ಘಾಟನೆ

ಕಲಬುರಗಿ,ಜ.10: ಅಫಜಲಪುರ ತಾಲೂಕಿನ ಘೂಳನೂರ ಗ್ರಾಮದ ಶ್ರೀ ಗುರುಸಿದ್ಧರಾಮೇಶ್ವರ ಹಿರೇಮಠದ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀಮತಿ ವಿಜಯಲಕ್ಷ್ಮಿ ದೇವಿಂದ್ರಪ್ಪಗೌಡ ಗೌಡಗೇರ ಮಂಗಲ ಭವನ ಉದ್ಘಾಟನಾ ಸಮಾರಂಭ ಜ.13ರಂದು ಸಂಜೆ 7ಕ್ಕೆ ನಡೆಯಲಿದೆ ಎಂದು ಸುಲಫಲ ಮಠದ ಜಗದ್ಗುರು ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.
ಇಲ್ಲಿನ ಪತ್ರಿಕಾ ಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ ಭವನ ಉದ್ಘಾಟಿಸಲಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಡಾಶರಣಪ್ರಕಾಶ ಪಾಟೀಲ್ ಜ್ಯೋತಿ ಬೆಳಗಿಸುವರು. ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಡಾ.ಅಜಯಸಿಂಗ್, ಶಾಸಕ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ್, ಸುನೀಲ ವಲ್ಯಾಪುರೆ, ಬಿ.ಜಿ.ಪಾಟೀಲ್, ಶಶಿಲ್ ನಮೋಶಿ, ಮಾಜಿ ಶಾಸಕ ದತ್ತಾತ್ರೇಯ ಸಿ.ಪಾಟೀಲ್ ರೇವೂರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ್, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಟಿ, ಉದ್ಯಮಿಗಳಾದ ಗೌಸ್ ಬಾಬಾ ಹಾಗೂ ಎಸ್.ವೈ.ಪಾಟೀಲ್, ಶಿವಕಾಂತ ಮಹಾಜನ್ ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ ಎಂದು ವಿವರಿಸಿದರು.
ಪ್ರಥಮ ದರ್ಜೆ ಗುತ್ತಿಗೆದಾರರಾದ ವಿಜಯಲಕ್ಷ್ಮಿ ದೇವಿಂದ್ರಪ್ಪಗೌಡ ಗೌಡಗೇರಾ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಗುತ್ತಿದೆ. ಎಚ್.ಕೆ.ಇ ನಿರ್ದೇಶಕ ಅರುಣಕುಮಾರ್ ಪಾಟೀಲ್, ಕಾರ್ಯನಿರ್ವಾಹಕ ಅಭಿಯಂತರ ಸುರೇಶ್ ಶರ್ಮಾ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ್ ಯಡ್ರಾಮಿ ಸಮಾರಂಭದ ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ ಎಂದರು.
ಘೂಳನೂರ ಮಠದ ಶಿವಾನಂದ ಸ್ವಾಮೀಜಿ, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಟಿ ಇದ್ದರು.


ಜ.14ರಂದು ರಥೋತ್ಸವ
ಘೂಳನೂರ ಗ್ರಾಮದ ಶ್ರೀ ಗುರುಸಿದ್ಧರಾಮೇಶ್ವರ ಹಿರೇಮಠದ ಜಾತ್ರೋತ್ಸವ ಹಿನ್ನೆಲೆಯಲ್ಲಿ ಜ.14ರಂದು ಬೆಳಗ್ಗೆ ಪಲ್ಲಕ್ಕಿ ಉತ್ಸವ ಹಾಗೂ ಸಂಜೆ 6ಕ್ಕೆ ರಥೋತ್ಸವ ನೆರವೇರಲಿದೆ ಎಂದು ಜಗದ್ಗುರು ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.
ಈಗಾಗಲೇ ಜ.4ರಿಂದ ಸೊನ್ನ ಮಠದ ಡಾ.ಶಿವಾನಂದ ಸ್ವಾಮೀಜಿ ಅವರು ಶ್ರೀ ಶರಣಬಸವೇಶ್ವರ ಪುರಾಣ ನಡೆಸಿಕೊಡುತ್ತಿದ್ದು, ಜ.13ರಂದು ಪುರಾಣ ಮಂಗಲಗೊಳ್ಳಲಿದೆ. ಒಟ್ಟು 11 ದಿನಗಳ ಜಾತ್ರೋತ್ಸವ ಪ್ರಯುಕ್ತ ಇಡೀ ಗ್ರಾಮಸ್ಥರು ಶ್ರೀಮಠದಲ್ಲಿಯೇ ರಾತ್ರಿ ಪ್ರಸಾದ ಸೇವಿಸುವುದು ಈ ಜಾತ್ರೋತ್ಸವದ ವಾಡಿಕೆಯಾಗಿದೆ ಎಂದರು.