ಬೆಂಗಳೂರು,ಏ,೯:ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ್ ಅವರ ನಿಧನದಿಂದ ತೆರವಾಗಿದ್ದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಚಂದ್ರಪ್ಪರವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಧಾಮ್‌ದಾಸ್‌ಗೆ ಪ್ರಚಾರ ಸಮತಿಯ ಸಹ ಅಧ್ಯಕ್ಷ ಕೆಪಿಸಿಸಿ ಪ್ರಚಾರ ಸಮಿತಿ ಸಹ ಅಧ್ಯಕ್ಷರಾಗಿ ಸುಧಾಮ್‌ದಾಸ್ ಅವರನ್ನು ನೇಮಕ ಮಾಡಲಾಗಿದೆ. ನಿವೃತ್ತ ಐಆರ್‌ಎಸ್ ಅಧಿಕಾರಿಯಾಗಿದ್ದ ಸುಧಾಮ್‌ದಾಸ್ ನೆಲಮಂಗಲ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ. ಅವರನ್ನು ಪ್ರಚಾರ ಸಮಿತಿ ಸಹ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.