ವಿಜಯವಾಡ, ಸೆ.೨೨- ಆಂದ್ರ ಪ್ರದೇಶದ ಕೌಶಲ್ಯ ಅಭಿವೃದ್ಧಿ ನಿಗಮದಲ್ಲಿನ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಡಿಪಿ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಇದೇ ೨೪ ರವರೆಗೆ ವಿಸ್ತರಿಸಿದೆ.
ಕಳೆದ ಹಲವು ದಿನಗಳಿಂದ ಚಂದ್ರಬಾಬು ನಾಯ್ಡು ಜೈಲಿನಲ್ಲಿದ್ದಾರೆ. ಇಂದು ನ್ಯಾಯಾಲಯ ಮತ್ತೆ ಎರಡು ದಿನಗಳ ವಶಕ್ಕೆ ನೀಡಿದೆ.
ಹೆಚ್ಚುವರಿ ಅಡ್ವೊಕೇಟ್ ಜನರಲ್ ಪೊನ್ನವೋಲು ಸುಧಾಕರ್ ರೆಡ್ಡಿ ಮಾತನಾಡಿ, ಭ್ರಷ್ಟಾಚಾರ ನಿಗ್ರಹ ದಳದ ವಿಶೇಷ ನ್ಯಾಯಾಲಯ ಚಂದ್ರಬಾಬು ನಾಯ್ಡು ಅವರ ಅವಧಿಯನ್ನು ಮತ್ತೆ ಎರಡು ದಿನ ವಿಸ್ತರಿಸಲಾಗಿದೆ ಎಂದರು.
ಚಂದ್ರ ಬಾಬು ನಾಯ್ಡು ಸಲ್ಲಿಸಿರುವ ಎಫ್‌ಐಆರ್ ರದ್ದು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮಧ್ಯಾಹ್ನಕ್ಕೆ ಮುಂದೂಡಿದೆ.
ಕೌಶಲ ಅಭಿವೃದ್ಧಿ ನಿಗಮದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಚಂದ್ರಬಾಬು ನಾಯ್ಡು ಅವರನ್ನು ಸೆಪ್ಟೆಂಬರ್ ೯ ರಂದು ಬಂಧಿಸಲಾಯಿತು, ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ ೩೦೦ ಕೋಟಿಗೂ ಹೆಚ್ಚು ನಷ್ಟವಾಗಿದೆ ಎಂದು ಆರೋಪಿಸಲಾಗಿದೆ.
ಚಂದ್ರಬಾಬು ನಾಯ್ಡು ಅವರನ್ನು ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.