ಚಂದ್ರಯಾನ-೩: ರಾಯಚೂರು ವಿವಿಯಲ್ಲಿ ಜರುಗಿದ ನೇರ ಪ್ರಸಾರ

ರಾಯಚೂರು,ಆ.೨೪-
ರಾಯಚೂರು ವಿಶ್ವವಿದ್ಯಾಲಯದ ಕೃಷ್ಣತುಂಗಾ ಆವರಣದಲ್ಲಿ ಚಂದ್ರಯಾನ-೩ ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಸಂದರ್ಭದ ವಿಶೇಷ ನೇರ ಪ್ರಸಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಭೌತಶಾಸ್ತ್ರ ಅಧ್ಯಯನ ವಿಭಾಗದ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕುಲಸಚಿವ (ಮೌಲ್ಯಮಾಪನ) ಪ್ರೊ. ಯರಿಸ್ವಾಮಿ.ಎಂ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ.ಜಿ.ಎಸ್.ಬಿರಾದಾರ, ವಿಜ್ಞಾನ ನಿಕಾಯಗಳ ಡೀನ್ ಪ್ರೊ. ಭಾಸ್ಕರ್, ಇಂಜಿನಿಯರ್ ಪಂಪಾಪತಿ ಸೇರಿದಂತೆ ವಿವಿಧ ವಿಭಾಗಗಳ ಅಧ್ಯಾಪರು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿಶ್ವವಿದ್ಯಾಲಯಗಳ ಅನುದಾನ ಆಯೋಗ (ಯುಜಿಸಿ) ಹಾಗೂ ಉನ್ನತ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಸಂಜೆ ೫.೩೦ರಿಂದ ೬.೩೦ರ ವರೆಗೆ ನೇರಪ್ರಸಾರ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸದರಿಯಂತೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಭಾರತದ ಚಂದ್ರಯಾನ-೩ ಯಶಸ್ವಿ ಯೋಜನೆಯ ಲ್ಯಾಂಡಿಂಗ್ ಪ್ರಕ್ರಿಯೆಯ ಸ್ಮರಣೀಯ ಸಂದರ್ಭಕ್ಕೆ ಸಾಕ್ಷಿಯಾದ ಸಭಿಕರು ಜೋರಾಗಿ ಕರತಾಡನ ಮಾಡುವ ಮೂಲಕ ಹರ್ಷ ವ್ಯಕ್ತಪಡಿಸಿದರು.