
ಕಲಬುರಗಿ: ಆ.24:ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರಯಾನ-3 ವಿಕ್ರಮ ಲ್ಯಾಂಡರ ಚಂದ್ರನ ಮೇಲೆ ವ್ಯವಸ್ಥಿತವಾಗಿ ಇಳಿದಿದೆ.ಅಂದರೆ ಚಂದ್ರನ ಮೇಲೆ ಭಾರತ ಎನ್ನಬಹುದೇನೋ.ವಿಶ್ವದ ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಇಸ್ರೋ ಹೊಸ ಮೈಲಿಗಲ್ಲೊದು ಸ್ಥಾಪಿಸಿದೆ. ಇದು ನಮ್ಮ ದೇಶಕ್ಕೆ ಅತ್ಯಂತ ಹೆಮ್ಮೆಯ ಸಂಗತಿ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅವರು ಸಂತಸ ವ್ಯಕ್ತಪಡಿಸಿದ್ದರು.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಇಂದು ಇಡೀ ವಿಶ್ವವೇ ತುದಿಗಾಲ ಮೇಲೆ ನಿಂತು ಕಾಯುತ್ತಿದ್ದ ಚಂದ್ರಯಾನ ಯಶಸ್ವಿಯಾಗಿರುವುದು ಕೋಟ್ಯಂತರ ಭಾರತೀಯರಿಗೆ ಹೆಮ್ಮೆಯ ವಿಷಯ.ಇದೊಂದು ಐತಿಹಾಸಿಕ ಘಟನೆ ಜಗತ್ತಿನ ಇತರ ಯಾವುದೇ ದೇಶಕ್ಕೆ ಆಗದಂತಹ ಸಾಧನೆಯನ್ನು ಭಾರತದ ಬಾಹ್ಯಾಕಾಶ ಸಂಸ್ಥೆ ವ್ಯವಸ್ಥಿತವಾಗಿ ನೇರ ಪ್ರಸಾರದಲ್ಲಿ ಇಡೀ ಜಗತ್ತಿಗೆ ತೋರಿಸಿದೆ.ಇಸ್ರೋದ ಪ್ರತಿಯೊಬ್ಬರೂ ಅಭಿನಂದನೆಗೆ ಅರ್ಹರು.ಚಂದ್ರನ ದಕ್ಷಿಣ ಧ್ರುವದ ಮೇಲೆ ಹೆಜ್ಜೆ ಇಟ್ಟ ಪ್ರಪಂಚದ ಪ್ರಪ್ರಥಮ ದೇಶ ಎಂಬ ಹೆಗ್ಗಳಿಕೆಗೆ ಭಾರತ ಭಾಜನವಾಗಿದೆ.ವಿಜ್ಞಾನಿಗಳ ಹಲವಾರು ವರ್ಷಗಳ ಶ್ರಮದ ಫಲವಾಗಿ ಇಂದು ಭಾರತ ಐತಿಹಾಸಿಕ ಸಾಧನೆ ಮಾಡಿದೆ.ಈ ಮೂಲಕ ಅಂತರಿಕ್ಷ ಸಂಶೋಧನೆಯ ಕ್ಷೇತ್ರದಲ್ಲಿ ಹೊಸ ಯುಗಕ್ಕೆ ನಾಂದಿ ಹಾಡಿದೆ ಎಂದರು.