
ಕಲಬುರಗಿ,ಆ.24-ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ ಬುಧವಾರ ಭೌತಶಾಸ್ತ್ರ ವಿಭಾಗದ ವತಿಯಿಂದ ವಿದ್ಯಾರ್ಥಿನಿಯರಿಗೋಸ್ಕರ “ಚಂದ್ರಯಾನ-3 ಐತಿಹಾಸಿಕ ಕ್ಷಣದ ವೀಕ್ಷಣೆ” ಎಂಬ ಶಿರ್ಷಿಕೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಮಹಾವಿದ್ಯಾಲಯದ ಸಭಾಂಗಣದಲ್ಲಿ ಭಾರತ ಮಾತ್ರವಲ್ಲ ವಿಶ್ವವೇ ಅತ್ಯಂತ ಕುತೂಹಲದಿಂದ ಎದುರು ನೋಡುತ್ತಿದ್ದ ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ-3 ಯಶಸ್ವಿಯ ವೀಕ್ಷಣೆಗೋಸ್ಕರ ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಿಕೊಂಡು ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಯವರು ಕಾದು ಕುಳಿತಿದ್ದರು. ನಿಗದಿತ ಸಮಯಕ್ಕೆ ಸರಿಯಾಗಿ ಚಂದ್ರಯಾನ 3 ರ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿಯುತ್ತಲೆ ವಿದ್ಯಾರ್ಥಿನಿಯರು “ಫಲಿಸಿತು ಕೊಟ್ಯಾಂತರ ಜನರ ಪ್ರಾರ್ಥನೆ, ಭಾಗಿಯಾದರು ವೀಕ್ಷÀಣೆಯಲಿ ವಿ.ಜಿ. ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು” ಎಂದು ಘೋಷಣೆಗಳನ್ನು ಕೂಗುತ್ತಾ ಸಂತೋಷದಿಂದ ಕುಣಿದು ಕುಪ್ಪಳಿಸಿದರು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ರಾಜೇಂದ್ರ ಕೊಂಡಾ ಅವರು ಚಂದ್ರಯಾನ-3ರ ಐಶಸ್ಸಿನ ಕುರಿತಾಗಿ ಮಾತನಾಡಿ, ಇಂದು ಭಾರತದ ಇಸ್ರೋದ ವಿಜ್ಞಾನಿಗಳು ಇತಿಹಾಸವನ್ನು ನಿರ್ಮಿಸಿದ್ದಾರೆ. ಆ ಮೂಲಕ ವಿಶ್ವದಲ್ಲಿ ಭಾರತ ದೇಶದ ಹೆಸರನ್ನು ಅಜರಾಮರವಾಗಿಸಿದ್ದಾರೆ ಎಂದು ಹೇಳುತ್ತ ಎಲ್ಲಾ ವಿಜ್ಞಾನಿಗಳಿಗೆ ಮಹಾವಿದ್ಯಾಲಯದ ಪರವಾಗಿ ಅಭಿನಂದನೆಗಳನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಜೊತೆಗೆ ಮಹಾವಿದ್ಯಾಲಯದ ಉಪಪ್ರಾಚಾರ್ಯರಾದ ಡಾ. ವೀಣಾ ಎಚ್, ಉಮಾ ರೇವೂರ, ಮಹಾವಿದ್ಯಾಲಯದ ನ್ಯಾಕ್ ಸಂಯೋಜಕ ಡಾ.ಮೋಹನರಾಜ ಪತ್ತಾರ, ಬೋಧಕ ಮತ್ತು ಬೋಧಕೇತ್ರರ ಸಿಬ್ಬಂಧಿ ವರ್ಗದವರು ಉಪಸ್ಥಿತರಿದ್ದರು.