ಚಂದ್ರಯಾನ 3 ಯಶಸ್ವಿ: ಸಚಿವ ಪ್ರಿಯಾಂಕ್ ಖರ್ಗೆ ಹರ್ಷ, ವಿಜ್ಞಾನಿಗಳಿಗೆ ಅಭಿನಂದನೆ

ಕಲಬುರಗಿ:ಆ.23:ಚಂದ್ರಯಾನ 3 ಯಶಸ್ವಿಯಾಗಿರುವುದಕ್ಕೆ ಇಸ್ರೋ ವಿಜ್ಞಾನಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್, ಐಟಿ/ ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅಭಿನಂದನೆ ಸಲ್ಲಿಸಿದ್ದಾರೆ.

ತಮ್ಮ ಟ್ವಿಟ್ ನಲ್ಲಿ ವಿಜ್ಞಾನಿಗಳ ಸಮರ್ಪಣಾ ಮನೋಭಾವ ಹಾಗೂ ಕಠಿಣ ಪರಿಶ್ರಮವನ್ನು ಮುಕ್ತ ಕಂಠದಿಂದ ಶ್ಲಾಘಿಸಿರುವ ಸಚಿವರು ” ಭಾರತೀಯರು ಈಗ ಚಂದ್ರನ ಮೇಲೆ ” ಎಂದು ಹೇಳಿದ್ದಾರೆ.