ಚಂದ್ರವಳ್ಳಿ ಕೆರೆಯಲ್ಲಿ ಸ್ವಚ್ಛತಾ ಶ್ರಮದಾನ


ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಸೆ.೨೮; ಚಿತ್ರದುರ್ಗ ನಗರದ ಐತಿಹಾಸಿಕ ಸ್ಥಳವಾದ ಚಂದ್ರವಳ್ಳಿ ಕೆರೆಯ ಸುತ್ತಮುತ್ತ ಪ್ರದೇಶದಲ್ಲಿ ಬುಧವಾರ ಸ್ವಚ್ಛತಾ ಹಿ ಸೇವಾ, ಸ್ವಚ್ಛತೆಯೇ ಸೇವೆ ಆಂದೋಲನದ ಅಂಗವಾಗಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಂಡು, ಸಾರ್ವಜನಿಕರಿಗೆ ಏಕಬಳಕೆ ಪ್ಲಾಸ್ಟಿಕ್ ಕುರಿತು ಅರಿವು ಮೂಡಿಸಲಾಯಿತು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿ, ಜಿಲ್ಲೆಯಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಸ್ವಚ್ಛತಾ ಹಿ ಸೇವಾ/ಸ್ವಚ್ಛತೆಯೇ ಸೇವೆ ಆಂದೋಲನ 2023ರ ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 2 ರವರೆಗೆ ವಿಶೇಷ ಆಂದೋಲನ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.ಅ. 1 ರಂದು ಏಕಕಾಲದಲ್ಲಿ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಏಕ್ ತಾರೀಖ್ ಏಕ್ ಗಂಟ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಹೆಚ್ಚು ಜನಜಂಗುಳಿ ಇರುವ ಸ್ಥಳಗಾದ ಬಸ್ ನಿಲ್ದಾಣ, ಸಮುದಾಯ ಭವನ, ಪ್ರವಾಸಿ ತಾಣಗಳು, ಸಾರ್ವಜನಿಕ ಸ್ಥಳಗಳಲ್ಲಿ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.ಶ್ರಮದಾನ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸತೀಶ್ ರೆಡ್ಡಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್ ರೆಡ್ಡಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕುಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಶಿಕ್ಷಕರು, ಆಶಾ-ಅಂಗನವಾಡಿ ಕಾರ್ಯಕರ್ತರು, ಸ್ವಚ್ಛ ಭಾರತ್ ಮಿಷನ್ (ಗ್ರಾ) ಜಿಲ್ಲಾ ಸಮಾಲೋಚಕರು ಇದ್ದರು.