ಚದುರಂಗ ಆಟ ಮಕ್ಕಳ ಬುದ್ಧಿಶಕ್ತಿ ಬೆಳವಣಿಗೆಗೆ ಸಹಕಾರಿ

ಸಂಜೆವಾಣಿ ವಾರ್ತೆ

ದಾವಣಗೆರೆ.ಮೇ.೨೦: ದಾವಣಗೆರೆ ಜಿಲ್ಲಾ ಚೆಸ್ ಅಸೋಸಿಯೇಷನ್ ನಿಂದ ನಗರದ ಗುರುಭವನದಲ್ಲಿ ಅಂತರ್ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು.  ದಾವಣಗೆರೆ ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ  ಉದ್ಘಾಟನೆ ಮಾಡಿದರು  ನಂತರಮಾತನಾಡಿದ ಅವರು ಮಕ್ಕಳಿಗೆ ಚದುರಂಗ ಆಟ ಆಡುವುದರಿಂದ ಬುದ್ಧಿಶಕ್ತಿ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಮಕ್ಕಳು ದೃಢ ನಿರ್ಧಾರ ತೆಗೆದುಕೊಳ್ಳುವಲ್ಲಿ ಪ್ರಬಲರಾಗುತ್ತಾರೆ ಇಂತಹ ಆಟಗಳು ಹೆಚ್ಚಿನ ರೀತಿಯಲ್ಲಿ ಮಕ್ಕಳಿಗೆ ಸಿಗುವಂತಾಗಲಿ ಮಕ್ಕಳು ರಾಷ್ಟ್ರ ಮತ್ತು ರಾಜ್ಯಮಟ್ಟಗಳಲ್ಲಿ ಹೆಸರು ಮಾಡಲಿ ಮುಂದಿನ ದಿನಗಳಲ್ಲಿ ದಾವಣಗೆರೆಯಲ್ಲಿ ಅಂತರರಾಷ್ಟ್ರೀಯ ರಾಷ್ಟ್ರೀಯ ಪಂದ್ಯಾವಳಿಗಳು ನಡೆಯಲಿ ನಮ್ಮ ಪ್ರೋತ್ಸಾಹ ಸದಾ ಇರುತ್ತದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಡಿ ಎನ್ ಜಗದೀಶ್ ಹಾಗೂ ಅಂತರಾಷ್ಟ್ರೀಯ ಚಸ್ ತೀರ್ಪುಗಾರರಾದ ಪ್ರಾಣೇಶ್ ಯಾದವ್ ವಿಜಯ್ ಕುಮಾರ್, ಪಂದ್ಯಾವಳಿಯ ಆಯೋಜಕರಾದ ಯುವರಾಜ್ , ಮಂಜುಳಾ ಯುವರಾಜ್ ಉಪಸ್ಥಿತರಿದ್ದರು