
ಚನ್ನಗಿರಿ.ಡಿ.೨೮; ಇಲ್ಲಿನ ಕಗತೂರು ರಸ್ತೆಯಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಿಂದ ವಿವಿಧ ವಾದ್ಯ ಮೇಳದ ಮೂಲಕ ಸ್ವಾಮಿಯ ವಿಗ್ರಹ ತಂದು ಪ್ರತಿಷ್ಠಾಪನೆ ಮಾಡಿ ವಿವಿಧ ಪೂಜೆಗಳೊಂದಿಗೆ ಹನುಮಾನ್ ಜಯಂತಿ ಆಚರಿಸಲಾಯಿತು. ಈ ವೇಳೆ ಭಕ್ತಾದಿಗಳಿಗೆ ಅನ್ನ ಸಮರ್ಪಣೆ ಹಾಗೂ ಪ್ರಸಾದ ವಿತರಣೆ ಮಾಡಲಾಗಿತ್ತು. ದಾವಣಗೆರೆ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಮಾಡಾಳ್ ಮಲ್ಲಿಕಾರ್ಜುನ್ ಆಗಮಿಸಿ ಪೂಜೆ ಸಲ್ಲಿಸಿದರು. ತಾಲೂಕು ನಗರ ಘಟಕದ ಅಧ್ಯಕ್ಷ ಗೋಪಿ ಕೆಆರ್. ಯುವ ಮೋರ್ಚಾ ಅಧ್ಯಕ್ಷ ದರ್ಶನ್. ಮಲ್ಲಿಕಾರ್ಜುನ್,ಪ್ರಸನ್ನ ಲಕ್ಷ್ಮೇಶ್ವರ ಹಾಗೂ ಭಕ್ತಾದಿಗಳು ಹಾಜರಿದ್ದರು.