ಚನ್ನಗಿರಿ; ಕಾಂಗ್ರೆಸ್ ಬೆಂಬಲಿತರ ಮೇಲುಗೈ ಸತ್ಯಕ್ಕೆ ಸಿಕ್ಕ ಜಯ

ಚನ್ನಗಿರಿ.ಡಿ.೩೧: ತೀವ್ರ ಕುತೂಹಲ ಕೆರಳಿಸಿದ್ದ ಚನ್ನಗಿರಿ ವಿಧಾನಸಭಾ ಕ್ಷೇತ್ರ ಗ್ರಾಮ ಪಂಚಾಯ್ತಿ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ ಇದು ಸತ್ಯಕ್ಕೆ ಸಿಕ್ಕ ಜಯವಾಗಿದೆ ಎಂದು ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ಬಸವರಾಜು ವಿ ಶಿವಗಂಗಾ ತಿಳಿಸಿದರು. 61 ಗ್ರಾಮ ಪಂಚಾಯ್ತಿಯಲ್ಲಿ 46 ಕ್ಕೂ ಹೆಚ್ಚು ಗ್ರಾಮ ಪಂಚಾಯ್ತಿಯಲ್ಲಿ ಕಾಂಗ್ರೆಸ್ ಬೆಂಬಲಿತರು ಜಯ ಸಾಧಿಸಿದ್ದಾರೆ. ಈ ಚುನಾವಣೆ ಆಡಳಿತರೂಢ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ನಡುವೆ ಪೈಪೋಟಿ ಏರ್ಪಟ್ಟಿದ್ದು ಕಾಂಗ್ರೆಸ್ ಪಕ್ಷಕ್ಕೆ ಜನರು ಬೆಂಬಲಿಸಿದ್ದಾರೆ. ಇದು ಸತ್ಯಕ್ಕೆ ಸಿಕ್ಕ ಜಯ ಎಂದು ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಬಸವರಾಜು ವಿ ಶಿವಗಂಗಾ ತಿಳಿಸಿದರು. ದೇಶದಲ್ಲಿ ಬಿಜೆಪಿ ವಿರುದ್ಧ ಅಲೆ ಎದ್ದಿದ್ದು ಗ್ರಾಮ ಪಂಚಾಯ್ತಿ ಚುನಾವಣೆ ಫಲಿತಾಂಶವೇ ಸಾಕ್ಷಿ ಎಂದರು.ಇದು ಮುಂದಿನ ವಿಧಾನಸಭಾ ಚುನಾವಣಗೆ ದಿಕ್ಸೂಚಿಯಾಗಲಿದೆ ಎಂದರು. ಜನರು ಕಾಂಗ್ರೆಸ್ ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ರವರಿಗೆ ಆನೆ ಬಲ ಬಂದಂತಾಗಿದೆ ಎಂದರು. ಕಾಂಗ್ರೆಸ್ ಪಕ್ಷ ಆಡಳಿತಾವಧಿಯಲ್ಲಿ ಮಾಡಿದ ಜನಪರ ಸೇವೆಗೆ ಮತದಾರರು ಒಪ್ಪಿ ಕಾಂಗ್ರೆಸ್ ಬೆಂಬಲಿತರನ್ನ ಗೆಲ್ಲಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತರ ಪರ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಕೆಲಸ ಮಾಡಿರುವ ಹಾಗೂ ಜಿಲ್ಲಾ ಕಾಂಗ್ರೆಸ್ ಹಾಗೂ ಕಿಸಾನ್ ಕಾಂಗ್ರೆಸ್ ಮುಖಂಡರಿಗೆ  ಬಸವರಾಜು ವಿ ಶಿವಗಂಗಾ ಅಭಿನಂದನೆ ಸಲ್ಲಿಸಿದರು.