ಚನ್ನಗಿರಿ ಕ್ಷೇತ್ರದಲ್ಲಿ ಗಾಯತ್ರಿ ಸಿದ್ದೇಶ್ವರ್ ಮತಯಾಚನೆ


ಸಂಜೆವಾಣಿ ವಾರ್ತೆ
ದಾವಣಗೆರೆ.ಏ.೫; ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯಿತ್ರಿ ಸಿದ್ದೇಶ್ವರ್ ಅವರು ಚನ್ನಗಿರಿ  ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ  ದೊಡ್ಡಬ್ಬಿಗೆರೆ ಮತ್ತು ಚಿಕ್ಕಬ್ಬಿಗೆರೆ ಗ್ರಾಮದಲ್ಲಿ ಅದ್ದೂರಿ ಪ್ರಚಾರ ನಡೆಸಿದರು.ಈ ವೇಳೆ ಮಾತನಾಡಿದ ಅವರು ದಾವಣಗೆರೆ ಕ್ಷೇತ್ರದಲ್ಲಿ ಸಂಸದ ಜಿ.ಎಂ ಸಿದ್ದೇಶ್ವರ್ ಅವರು ಕಳೆದ ಹತ್ತು ವರ್ಷಗಳಿಂದ ಹಲವಾರು ಯೋಜನೆಗಳ ಮೂಲಕ ಅಭಿವೃದ್ಧಿ ‌ಕಾರ್ಯ ಕೈಗೊಂಡಿದ್ದಾರೆ.ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಅಭಿವೃದ್ಧಿ ಪಥದಲ್ಲಿ ಸಾಗಿದೆ.ದೇಶ ಸುಭದ್ರತೆ ಆರ್ಥಿಕತೆಯಲ್ಲಿ ಮುಂದಿದೆ.ಅದೇ ರೀತಿ ರಾಜ್ಯದಲ್ಲೂ ಅನೇಕ ಅಭಿವೃದ್ಧಿ ಕಾರ್ಯ ನಡೆದಿವೆ.ದಾವಣಗೆರೆ ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿಗೆ ಪತಿಯವರಾದ ಜಿ.ಎಂ ಸಿದ್ದೇಶ್ವರ್ ಅವಿರತವಾಗಿ ಶ್ರಮಿಸಿದ್ದಾರೆ.ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯ ಮತ್ತಷ್ಟು ಅಭಿವೃದ್ಧಿಗೆ‌ ಈ ಬಾರಿ ನನ್ನನ್ನು ಗೆಲ್ಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.ಈ ಸಂದರ್ಭದಲ್ಲಿ ಬಿಜೆಪಿ ನಾಯಕರಾದ ಮಾಡಳ್ ಮಲ್ಲಿಕಾರ್ಜುನ್, ಶಿವಕುಮಾರ್, ಮಂಡಳದ ಅಧ್ಯಕ್ಷರಾದ ಗೀರಿಶ್ ನಾಯ್ಕ್, ಮಂಡಳದ ಸದಸ್ಯರು ಗ್ರಾಮ ಪಂಚಾಯಿತಿ ಸದಸ್ಯರು,ಬೂತ್ ಮಟ್ಟದ ಅಧ್ಯಕ್ಷು,ಗ್ರಾಮದ ಬಿಜೆಪಿ ಮುಖಂಡರು ಸೇರಿದಂತೆ ಚನ್ನಗಿರಿ ವಿಧಾನ ಸಭಾ ಕ್ಷೇತ್ರದ ಮುಖಂಡರು ಇದ್ದರು