ಚನ್ನಗಿರಿ ಕ್ಷೇತ್ರದಲ್ಲಿ ಡಾ.ಪ್ರಭಾ ಮಲ್ಲಿಕಾರ್ಜುನ್‌  ಮತಯಾಚನೆ

ಸಂಜೆವಾಣಿ ವಾರ್ತೆ

ದಾವಣಗೆರೆ. ಏ.೨೪; ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಡಾ. ಪ್ರಭಾ ಮಲ್ಲಿಕಾರ್ಜುನ್ ರವರು ಚನ್ನಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚುನಾವಣಾ ಪ್ರಚಾರವನ್ನು ಕೆಂಪನಹಳ್ಳಿ ಗ್ರಾಮದಿಂದ ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ವಡ್ನಾಳ್ ರಾಜಣ್ಣ, ಶಾಸಕರಾದ ಶಿವಗಂಗಾ ಬಸವರಾಜ್, ಬ್ಲಾಕ್ ಅಧ್ಯಕ್ಷರಾದ ಜಬಿವುಲ್ಲಾ, ಶ್ರೀನಿವಾಸ್, ಪಕ್ಷದ ಮುಖಂಡರಾದ ಹೊದಿಗೆರೆ ರಮೇಶ್, ವೀರೇಶ್ ನಾಯ್ಕ, ವಡ್ನಾಳ್ ಜಗದೀಶ್, ಶಿವಗಂಗಾ ಶ್ರೀನಿವಾಸ್ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಡಾ.ಪ್ರಭಾ ಮಲ್ಲಿಕಾರ್ಜುನ್‌  ಮತದಾನ ಮಾಡುವ ಮುನ್ನ 25 ವರ್ಷದಿಂದ ಬಿಜೆಪಿ ಸಂಸದರುಗಳು ದಾವಣಗೆರೆ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಏನು ಎಂದು ಯೋಚಿಸಿ ಮತದಾನ ಮಾಡಬೇಕು ಎಂದರು.ಈ‌ಹಿಂದೆ ಸಂಸದರಾಗಿ‌  ಆಯ್ಕೆಯಾಗಿದ್ದವರು  ತಮ್ಮನ್ನು ಆಯ್ಕೆ ಮಾಡಿದ ಕ್ಷೇತ್ರದ ಅಭಿವೃದ್ಧಿಗಿಂತ ತಮ್ಮ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದಾರೆ ಎನ್ನುವುದಕ್ಕೆ ಅನೇಕ ಉದಾಹರಣೆಗಳಿವೆ.ಆದ್ದರಿಂದ ಮತದಾರರು ಕಾಂಗ್ರೆಸ್ ಅಭ್ಯರ್ಥಿಯಾದ ನನಗೆ ಮತ ನೀಡಿ ಆಯ್ಕೆ ಮಾಡಬೇಕು ಎಂದರು.ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಕಾರ್ಯಕರ್ತರು ಕಾಂಗ್ರೆಸ್ ಗೆ ಜೈಕಾರ ಹಾಕಿದರು.