ಚನ್ನಬಸವ ಪಟ್ಟದ್ದೇವರ ಸ್ಮರಣೋತ್ಸವ ರದ್ದು

ಭಾಲ್ಕಿ:ಎ.20: ಇಲ್ಲಿನ ಚನ್ನಬಸವಾಶ್ರಮ ದಲ್ಲಿ ಏ.22ರಂದು ನಡೆಯಬೇಕಿದ್ದ ಡಾ.ಚನ್ನಬಸವ ಪಟ್ಟದ್ದೇವರ ಸ್ಮರಣೋತ್ಸವ ಮತ್ತು ವಚನಜಾತ್ರೆ-2021 ಅನ್ನು ರದ್ದುಪಡಿಸ ಲಾಗಿದೆ ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ತಿಳಿಸಿದ್ದಾರೆ.

ಯುವಜನಾಂಗಕ್ಕೆ ಡಾ.ಚನ್ನಬಸವ ಪಟ್ಟದ್ದೇವರ ಜೀವನ, ಸಾಧನೆ ಪರಿಚಯಿಸುವ ನಿಟ್ಟಿನಲ್ಲಿ ಕಳೆದ 20 ವರ್ಷಗಳಿಂದ ಪಟ್ಟದ್ದೇವರ ಸ್ಮರಣೋತ್ಸವವನ್ನು ಶ್ರೀಮಠದ ವತಿಯಿಂದ ಅದ್ಧೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಈ ವರ್ಷ ಕೋವಿಡ್-19 ಪ್ರಯುಕ್ತ ಡಾ.ಬಸವಲಿಂಗ ಪಟ್ಟದ್ದೇವರ ಸಾನ್ನಿಧ್ಯದಲ್ಲಿ ಈಚೆಗೆ ಭಕ್ತರ ಪೂರ್ವಭಾವಿ ಸಭೆ ಕರೆದು ಸರಳ ಆಚರಣೆಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ, ಕೋವಿಡ್ ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಸಂಪೂರ್ಣ ನಿಷೇಧ ಹೇರಿ ಆದೇಶ ಹೊರಡಿಸಿದೆ.ಈ ಕಾರಣ ಸ್ಮರಣೋತ್ಸವ ರದ್ದುಪಡಿಸ ಲಾಗಿದೆ. ಭಕ್ತರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಸ್ಮರಣೋತ್ಸವ ದಿನದಂದು ಭಕ್ತರು ತಮ್ಮ ಮನೆಗಳಲ್ಲಿ ಪಟ್ಟದ್ದೇವರ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಿ ಗೌರವ ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.