ಚಪ್ಪಲಿ ಅಂಗಡಿಗೆ ಬೆಂಕಿ: 1.50 ಲಕ್ಷ ರೂ.ಹಾನಿ

ವಿಜಯಪುರ,ಮಾ.3-ಜಿಲ್ಲೆಯ ತಿಕೋಟಾ ಪಟ್ಟಣದ ಬಾಬಾನಗರದಲ್ಲಿರುವ ಚಪ್ಪಲಿ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿವೆ.
ನಿಂಗಪ್ಪ ಯಲ್ಲಪ್ಪ ಹನುಮರಿ ಎಂಬುವವರಿಗೆ ಸೇರಿದ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿದ್ದ ವಿವಿಧ ಬ್ರ್ಯಾಂಡ್‍ನ ಚಪ್ಪಲಿಗಳು ಬೆಂಕಿಗಾಹುತಿಯಾಗಿವೆ.
ಸುಮಾರು 1.50 ಲಕ್ಷ ಮೌಲ್ಯದ ವಸ್ತುಗಳು ಹಾನಿಯಾಗಿದ್ದು, ಸ್ಥಳಕ್ಕೆ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಿಕೋಟಾ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.