ಚರ್ಚಾ ಸ್ಪರ್ಧೆ ಮುಸ್ಕಾನ ಎಸ್.ಸಿ ಪ್ರಥಮ

ವಿಜಯಪುರ: ಜ.19:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು ಇವರ ಸಹಯೋಗದಲ್ಲಿ ದಿ.17 ರಂದು ವಿಶ್ವವಿದ್ಯಾನಿಲಯದ ಡಾ. ಬಿ.ಆರ್. ಅಂಬೇಡ್ಕರ್ ಸಭಾ ಭವನದಲ್ಲಿ “ಸಹಕಾರ ವಿಷಯ” ಕುರಿತು ವಿಶ್ವವಿದ್ಯಾಲಯ ಮಟ್ಟದ ಚರ್ಚಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಚರ್ಚಾ ಸ್ಪರ್ಧೆಯಲ್ಲಿ ಸ್ನಾತಕ ವಿದ್ಯಾರ್ಥಿನಿಯರಿಗಾಗಿ “ಭಾರತದಲ್ಲಿ ಗ್ರಾಮೀಣ ಅಭಿವೃದ್ಧಿ ಸಾಧಿಸುವಲ್ಲಿ ಸಹಕಾರಿ ವ್ಯವಸ್ಥೆ ಪೂರಕವಾಗಿದೆ” ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರಿಗಾಗಿ ವಿಶ್ವದ ಆರ್ಥಿಕ ವ್ಯವಸ್ಥೆ ಸುಭದ್ರಗೊಳಿಸಲು ಸಹಕಾರಿ ವ್ಯವಸ್ಥೆ ಪೂರಕವಾಗಿದೆ” ಎಂಬ ಚರ್ಚಾ ವಿಷಯವನ್ನು ನೀಡಲಾಗಿತ್ತು.
ಸ್ನಾತಕ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಂಗಾವತಿಯ ಸಂಕಲ್ಪ ಪದವಿ ಮಹಿಳಾ ಮಹಾವಿದ್ಯಾಲಯದ ಮುಸ್ಕಾನ ಎಸ್.ಸಿ,
ಬಾಗಲಕೋಟನ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದ ಭೀಮವ್ವ ಪಾಟೀಲ ದ್ವಿತೀಯ ಸ್ಥಾನ ಹಾಗೂ ಮುಧೋಳ ದಾನಮ್ಮದೇವಿ ಮಹಿಳಾ ಮಹಾವಿದ್ಯಾಲಯದ ದಾನೇಶ್ವರಿ ಅರಗಂಜಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ಸ್ನಾತಕೋತ್ತರ ವಿಭಾಗದಲ್ಲಿ ಮಹಿಳಾ ವಿವಿಯ ಅರ್ಥಶಾಸ್ತ್ರ ವಿಭಾಗದ ಆಶಾ ಭಾವಿಕರ ಪ್ರಥಮ ಸ್ಥಾನ, ಭೌತಶಾಸ್ತ್ರ ಅಧ್ಯಯನ ವಿಭಾಗದ ಶ್ರೇಯಾಂಕ್ ದ್ವಿತೀಯ ಸ್ಥಾನ ಹಾಗೂ ಕನ್ನಡ ಅಧ್ಯಯನ ವಿಭಾಗದ ಸವಿತಾ ತೆಗ್ಗಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ, ಸಹಾಯಕ ನಿರ್ದೇಶಕಿ ಅಶ್ವಿನಿ ಕೆ.ಎನ್, ನಗರದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಮುಖ್ಯ ನಿರ್ವಹಣಾಧಿಕಾರಿ ಸವಿತಾ ಬಿಸನಾಳ ಹಾಗೂ ಪ್ರೊ. ಶಾಂತಾದೇವಿ, ಪ್ರೊ. ರಾಜಕುಮಾರ ಮಾಲಿಪಾಟೀಲ, ವಿವಿಧ ವಿಭಾಗಗಳ ಸ್ನಾತಕ ಮತ್ತು ಸ್ನಾತಕೋತ್ತರ ಹಾಗೂ ಸಂಲಗ್ನ ಮಹಾವಿದ್ಯಾಲಯಗಳ 100 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಮಹಿಳಾ ವಿವಿಯ ಕುಲಪತಿ ಪ್ರೊ. ಬಿ.ಕೆ. ತುಳಸಿಮಾಲ ಮತ್ತು ಕುಲಸಚಿವ ಪ್ರೊ. ಬಿ.ಎಸ್. ನಾವಿ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಅಭಿನಂದಿಸಿದ್ದಾರೆ.