ಚರ್ಮಗಂಟು ರೋಗ: ಸಂಕಷ್ಟದಲ್ಲಿ ರೈತರು

ಧಾರವಾಡ, ನ 23: ಪಶುಗಳಿಗೆ ಚರ್ಮಗಂಟು ರೋಗದಿಂದ ಜಿಲ್ಲೆಯಲ್ಲಿ ರೈತರು ಸಂಕಷ್ಟ ಎದುರಿಸುವಂತಾಗಿದೆ ಎಂದು ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಂಚಾರಿ ಅಸ್ಪತ್ರೆ ಬಿಟ್ಟು 115 ಪಶು ಆಸ್ಪತ್ರೆ ಇದೆ. ಪಶು ಸಂಗೋಪನೆ ಇಲಾಖೆಯ ಕೆಲ ವೈದ್ಯರು, ಸಿಬ್ಬಂದಿ ಬೇರೆ ಕಡೆಯಲ್ಲಿ ನಿಯೋಜನೆ ಮಾಡಲಾಗಿದೆ. ಪಶುಗಳಿಗೆ ಚಿಕಿತ್ಸೆ ನೀಡಲು ವೈದ್ಯಕೀಯ ಸಿಬ್ಬಂದಿ ನೇಮಕ ಮಾಡಬೇಕು ಎಂದರು.

ಧಾರವಾಡ ಜಿಲ್ಲೆಯ ಕಲಘಟಗಿ, ಕುಂದಗೋಳ, ಹುಬ್ಬಳ್ಳಿ, ಧಾರವಾಡ, ನವಲಗುಂದದಲ್ಲಿ ಅಧಿಕವಾಗಿ ಚರ್ಮಗಂಟು ರೋಗ ಅಧಿಕವಾಗಿ ಹರಡುತ್ತಿರುವದರಿಂದ ರೈತರಿಗೆ ಸಂಕಷ್ಟ ಎದುರಾಗಿದೆ ಎಂದು ತಿಳಿಸಿದರು. ಸರ್ಕಾರ ನೀಡುವ ಪರಿಹಾರ ವೈಜ್ಞಾನಿಕವಾಗಿಲ್ಲ ಸರ್ಕಾರ ಎತ್ತು / ಹೋರಿಗೆ ಕೇವಲ 30 ಸಾವಿರ ನೀಡುತ್ತಿದೆ. ಅಕಳಿಗೆ 20 ಸಾವಿರ, ಕರುವಿಗೆ ಕೇವಲ 5 ಸಾವಿರ ಪರಿಹಾರ ಧನ ವಿತರಿಸುತ್ತಿದೆ, ಅದು ಸಕಾಲದಲ್ಲಿ ಪರಿಹಾರ ಸಿಗುತ್ತಿಲ್ಲ ಎಂದು ತಿಳಿಸಿದರು.

ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಕುರಿತು ಗಂಭೀರವಾಗಿ ಪರಿಗಣಿಸಬೇಕು. ರೈತರಿಗೆ ಅನುಕೂಲ ಆಗುವಂತೆ ಪಶು ವೈದ್ಯಕೀಯ ಕೇಂದ್ರ ಪ್ರಾರಂಭ ಮಾಡಬೇಕು. ಅವುಗಳಿಗೆ ಸರಿಯಾದ ವೈದ್ಯಕೀಯ ಸಿಬ್ಬಂದಿ ಹಾಗೂ ಔಷಧಿ ಒದಗಿಸಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ನಾಗರಾಜ ಕಿರಣಗಿ, ರಾಘವೇಂದ್ರ ಶೆಟ್ಟಿ ಸೇರಿದಂತೆ ಮತ್ತಿತರರು ಇದ್ದರು.