ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಪ್ರಯಾಣಿಕರು ಪಾರು

ಔರಂಗಾಬಾದ್ (ಮಹಾರಾಷ್ಟ್ರ),ಸೆ.18- ಚಲಿಸುತ್ತಿದ್ದ ಬಸ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಇಡೀ ಬಸ್​ ಹೊತ್ತಿ ಉರಿದ ಘಟನೆ ನಗರದಲ್ಲಿ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಕರ್ಮದ್‌ನಿಂದ ಔರಂಗಾಬಾದ್ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಬರುತ್ತಿದ್ದಾಗ ವರೂದ್ ಫಟಾ ಬಳಿ ಸಿಟಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಸಂರ್ಪೂಣವಾಗಿ ಬಸ್​ ಹೊತ್ತಿ ಉರಿದಿದ್ದು, ದಟ್ಟ ಹೊಗೆ ಆವರಿಸಿತ್ತು. ಇದನ್ನು ಕಂಡ ಜನರು ಸ್ಥಳದಲ್ಲಿ ಭಾರಿ ಸಂಖ್ಯೆಯಲ್ಲಿ ಜಮಾವಣೆಕೊಂಡಿದ್ದರು. ನಂತರ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಅಗ್ನಿ ನಂದಿಸಿದ್ದಾರೆ.
ಇನ್ನು, ಬಸ್​ನಲ್ಲಿ ಹತ್ತರಿಂದ ಹನ್ನೆರಡು ಮಂದಿ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾರಿಗೂ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ಆದರೆ, ಬೆಂಕಿ ಅನಾಹುತಕ್ಕೆ ನಿಖರವಾದ ಕಾರಣ ಇನ್ನೂ ಗೊತ್ತಾಗಿಲ್ಲ