ಚಲಿಸುತ್ತಿದ್ದ ರೈಲಿಗೆ ಬಿದ್ದು ಯುವಕ ಆತ್ಮಹತ್ಯೆ

ಕಲಬುರಗಿ,ಜ.14-ನಗರದ ಕೋರಂಟಿ ಹನುಮಾನ ಮಂದಿರದ ರೈಲ್ವೆ ಟ್ರ್ಯಾಕ್ ಬಳಿ ಚಲಿಸುತ್ತಿದ್ದ ರೈಲಿಗೆ ಬಿದ್ದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ.
ನಗರದ ಜಗತ್ ಬಡಾವಣೆಯ ಹನುಮಾನ ಮಂದಿರ ಏರಿಯಾ ನಿವಾಸಿ ರಾಕೇಶ್ ಅಮೀನ್ ರೆಡ್ಡಿ (27) ಆತ್ಮಹತ್ಯೆ ಮಾಡಿಕೊಂಡ ಯುವಕ.
ರಾಕೇಶ್ ರೆಡ್ಡಿ ಹೋಟೆಲ್ ಬಿಸಿನೆಸ್ ನಲ್ಲಿ ತೊಡಗಿಸಿಕೊಂಡಿದ್ದ. ಬಿಜಿನೆಸ್ ನಲ್ಲಿ ಲಾಸ್ ಆಗಿತ್ತು. ಹೀಗಾಗಿ ನೊಂದು ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಸಂಬಂಧ ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.