ಚಾಂಬೋಳ್: ಹಳೆಯ ವಿದ್ಯಾರ್ಥಿಗಳಿಂದ ರಂಗ ಮಂದಿರ ನಿರ್ಮಾಣ

ಬೀದರ್:ಸೆ.23: ತಾಲ್ಲೂಕಿನ ಚಾಂಬೋಳ್ ಗ್ರಾಮದಲ್ಲಿ ಶ್ರೀ ರುದ್ರಮುನಿ ಪಟ್ಟದ್ದೇವರು ವಿದ್ಯಾ ಸಂಸ್ಥೆಯ ಹಳೆಯ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳು ಸ್ವಂತ ಖರ್ಚಿನಲ್ಲಿ ಬಯಲು ರಂಗ ಮಂದಿರ ನಿರ್ಮಾಣಕ್ಕೆ ಮುಂದಾಗುವ ಮೂಲಕ ಗಮನ ಸೆಳೆದಿದ್ದಾರೆ.

ಗ್ರಾಮದ ಶ್ರೀ ವೀರಭದ್ರೇಶ್ವರ ಪ್ರೌಢಶಾಲೆ ಆವರಣದಲ್ಲಿ ಬಯಲು ರಂಗ ಮಂದಿರ ಕಟ್ಟಡಕ್ಕೆ ಖಾನಾಪುರದ ಆನಂದ ಆಶ್ರಮದ ಜಗದೇಶ್ವರಿ ಮಾತೆ ಅಡಿಗಲ್ಲು ನೆರವೇರಿಸಿದರು.

ಸಮಾರಂಭದಲ್ಲಿ ಮಾತನಾಡಿದ ಹೆಡಗಾಪುರದ ಶಿವಲಿಂಗ ಶಿವಾಚಾರ್ಯರು, ಹಳೆಯ ವಿದ್ಯಾರ್ಥಿಗಳು ರೂ. 1.5 ಲಕ್ಷ ವೆಚ್ಚದಲ್ಲಿ ಬಯಲು ರಂಗ ಮಂದಿರ ನಿರ್ಮಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ತಾವು ಓದಿದ ಶಾಲೆಯನ್ನು ಎಂದೂ ಮರೆಯಬಾರದು. ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಸಲಹೆ ಮಾಡಿದರು.

ರುದ್ರಮುನಿ ಪಟ್ಟದ್ದೇವರು ಮಾತನಾಡಿ, ಹಳೆಯ ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ಶಾಲೆ ಅಭಿವೃದ್ಧಿಗೆ ಕೈಜೋಡಿಸಿರುವುದು ಸಂತಸ ಉಂಟು ಮಾಡಿದೆ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಸಾಂಸ್ಕøತಿಕ ಚಟುವಟಿಕೆಗೆ ಅನುಕೂಲ ಮಾಡಿಕೊಡಲು ಬಯಲು ರಂಗ ಮಂದಿರ ನಿರ್ಮಾಣ ಮಾಡಲಾಗುತ್ತಿದೆ. ಬರುವ ದಿನಗಳಲ್ಲಿ ಇನ್ನೂ ಅನೇಕ ಚಟುವಟಿಕೆಗಳನ್ನು ಕೈಗೊಳ್ಳಲು ಯೋಜಿಸಲಾಗಿದೆ ಎಂದು ಹಳೆಯ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳು ತಿಳಿಸಿದರು.

ಶ್ರೀ ರುದ್ರಮುನಿ ಪಟ್ಟದ್ದೇವರು ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಸುರೇಶ ಬಿರಾದಾರ, ಉಪಾಧ್ಯಕ್ಷ ಶ್ರೀಮಂತ ಪಾಟೀಲ, ಕಾರ್ಯದರ್ಶಿ ಶಿವನಾಥ ಕತ್ತೆ, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಗ್ರಾಮದ ಗಣ್ಯರು ಇದ್ದರು.