ಚಾಗಭಾವಿ ಗ್ರಾ.ಪಂ.ಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ

ಸಿರಿವಾರ.ಆ.೦೪- ತಾಲೂಕಿನ ಚಾಗಭಾವಿ ಗ್ರಾಮ ಪಂಚಾಯಿತಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಸುಜಾತ ಶಿವರಾಜಪ್ಪ ಮಾಲಿಪಾಟೀಲ್ ಚಾಗಭಾವಿ ಅವರು ಅಧ್ಯಕ್ಷರಾಗಿ ಹಾಗೂ ಷಣ್ಮುಖ ಜಾಲಾಪೂರ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಈ ವೇಳೆ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಂಪಯ್ಯ ಸಾಹುಕಾರ್ ಹಾಗು ಕಾಂಗ್ರೆಸ್ ಮುಖಂಡರಾದ ಎಂ.ಈರಣ್ಣ ಅವರಿಗೆ ಗ್ರಾಮ ಪಂಚಾಯತಿ ಅಧ್ಯಕ್ಷರಿಂದ ಸನ್ಮಾನಿಸಿ ಗೌರವಿಸಲಾಯಿತು. ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.