ಚಾಮರಾಜನಗರದಲ್ಲಿ ಕ್ಷಯ ರೋಗದ ಬಗ್ಗೆ ಅರಿವು

ಚಾಮರಾಜನಗರ, ನ.10: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಕಾರ್ಯಕ್ರಮದಡಿ ಪಟ್ಟಣದ 8 ನೇ ವಾರ್ಡಿನ ಮನೆಗಳಿಗೆ ಆಶಾ ಕಾರ್ಯಕರ್ತರು ಇಂದು ಕ್ಷಯ ರೋಗದ ಬಗ್ಗೆ ಅರಿವು ಮೂಡಿಸಿದರು.
ಈ ವೇಳೆ ಮಾತನಾಡಿದ ಆಶಾ ಕಾರ್ಯಕರ್ತೆ ಅಶ್ವಿನಿ ಅವರು ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರದಿಂದ ಟಿಬಿ ಕಾಯಿಲೆ ಬಗ್ಗೆ ಭಿತ್ತಿ ಪತ್ರಗಳನ್ನು ವಿತರಿಸಿದ್ದು ರೋಗದ ಸಂಪೂರ್ಣ ಲಕ್ಷಣದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಕ್ಷಯ ಲಕ್ಷಣಗಳಿದ್ದವರ ಮಾಹಿತಿ ಪಡೆದು ಅವರಿಗೆ ಸೂಕ್ತ ಚಿಕಿತ್ಸೆಗೆ ವೈದ್ಯಾಧಿಕಾರಿಗಳಿಗೆ ಶಿಫಾರಸ್ಸು ಮಾಡಿ ಮಾಹಿತಿ ಪಡೆಯುತ್ತಿರುವುದಾಗಿ ತಿಳಿಸಿದರು. ಆಶಾ ಕಾರ್ಯಕರ್ತೆ ರುಕ್ಮಿಣಿ ಇದ್ದರು.