ಚಾಮರಾಜನಗರದಲ್ಲಿ ವರುಣನ ಆರ್ಭಟ: ಧರೆಗುರುಳಿದ ಮರ, ನೆಲಕಚ್ಚಿದ ಬಾಳೆ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಏ.12- ಎರಡು ದಿನ ಸಾಧಾರಣ ಮಳೆಯಾಗಿ ಬಿಡುವು ನೀಡಿದ್ದ ಮಳೆ ನಿನ್ನೆ ಮಧ್ಯಾಹ್ನ ಭರ್ಜರಿಯಾಗಿ ಸುರಿದು ಇಳೆ ತಂಪೆರೆಯಿತು.
ಚಾಮರಾಜನಗರ ಜಿಲ್ಲಾ ಕೇಂದ್ರ ಹಾಗೂ ತಾಲೂಕಿನಾದ್ಯಂತ ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು-ಸಿಡಿಲು ಆರ್ಭಟದೊಂದಿಗೆ ಜೋರು ಮಳೆಯಾಗಿದ್ದು ಬಿಸಿಲಿನಿಂದ ಬಸವಳಿದಿದ್ದ ಜನರು ಹರ್ಷಗೊಂಡಿದ್ದಾರೆ.
ಚಾಮರಾಜನಗರ, ಚಾಮರಾಜನಗರ ತಾಲೂಕಿನ ಹರದನಹಳ್ಳಿ, ಬ್ಯಾಡಮೂಡ್ಲು, ಹೆಬ್ಬಸೂರು, ಚಂದಕವಾಡಿ, ಮರಿಯಾಲ, ಕೆಲ್ಲಂಬಳ್ಳಿ ಸುತ್ತಮುತ್ತಾ ಭರ್ಜರಿ ಮಳೆಯಾಗಿದೆ.
ಇನ್ನು, ಬಿರುಗಾಳಿ ರಭಸಕ್ಕೆ ಚಾಮರಾಜನಗರದ ಚಾಮರಾಜೇಶ್ವg ಉದ್ಯಾನವನದ ಭುವನೇಶ್ವರಿ ವಿಗ್ರಹದ ಬಳಿ ಭಾರಿ ಮರವೊಂದು ಧರೆಗುರುಳಿದೆ. ಅದೃಷ್ಟವಶಾತ್ ಆ ವೇಳೆ, ಉದ್ಯಾನವನದಲ್ಲಿ ಯಾರೂ ಇಲ್ಲದಿದ್ದರಿಂದ ಪ್ರಾಣಹಾನಿ ತಪ್ಪಿದೆ.
ಹೆಬ್ಬಸೂರು, ಬ್ಯಾಡಮೂಡ್ಲು ಗ್ರಾಮಗಳಲ್ಲಿ ಬಿರುಗಾಳಿ ಸಹಿತ ಮಳೆಗೆ ಎಕರೆಗಟ್ಟಲೆ ಬಾಳೆ ಫಸಲು ನೆಲಕಚ್ಚಿದೆ.