ಚಾಮುಂಡೇಶ್ವರಿ ಕ್ಷೇತ್ರದ ಸೋಲಿಗೆ ಸ್ಥಳೀಯ ಕೈ ನಾಯಕರು ಕಾರಣ: ಸಿದ್ದು ಸ್ಪಷ್ಟನೆ

ಬೆಂಗಳೂರು, ಡಿ.19-ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ಸೋಲಿಗೆ ಅಲ್ಲಿನ ಕೆಲವು ಸ್ಥಳೀಯ ಕಾಂಗ್ರೆಸ್ ನಾಯಕರು ಕಾರಣ ಹೊರತು ರಾಜ್ಯ ಮಟ್ಟದ ನಾಯಕರು ಎಂದು ಹೇಳಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ

ತಾವು ನೀಡಿದ ಹೇಳಿಕೆಗೆ ವಿಪರೀತಾರ್ಥ ಕಲ್ಪಿಸುವುದು ಬೇಡ ಬೇಡ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ

ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ

ರೈತ ಮಾರಾಟಕ್ಕೆ ಬೆಂಬಲ:

ಕಾಂಗ್ರೆಸ್ ಪಕ್ಷ ರೈತರ ಹೋರಾಟಗಳಿಗೆ ಬೆಂಬಲ ನೀಡುವ ಜೊತೆಗೆ ರೈತ ವಿರೋಧಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡಲಿದೆ‌ ಎಂದು ಅವರು ಹೇಳಿದ್ದಾರೆ

ದೇಶದ ಕೃಷಿ ವ್ಯವಸ್ಥೆಗೆ ಮಾರಕವಾದ ಕಾಯ್ದೆಗಳ ಜಾರಿಗೆ ನಮ್ಮ ಪ್ರಬಲ ವಿರೋಧವಿದೆ ಎಂದು ತಿಳಿಸಿದ್ದಾರೆ

ಅನುದಾನ ನೀಡಲು ಆಗ್ರಹ:

ಹಂಪಿ ಕನ್ನಡ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳು ಅನುದಾನ ಕೊರತೆಯಿಂದ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಾಗದ ಪರಿಸ್ಥಿತಿಗೆ ತಲುಪಿವೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಅಗತ್ಯ ಅನುದಾನ ನೀಡಿ, ಅವುಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಲು ನೆರವಾಗಬೇಕು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಅಪಾರ್ಥ ಬೇಡ:

ಆಡು,ಕುರಿ,ಕೋಳಿ, ಹಂದಿ, ದನ ಹೀಗೆ ನಮ್ಮಲ್ಲಿ ಭಿನ್ನ ಆಹಾರ ಸಂಸ್ಕೃತಿ ಇದೆ.‌ಆಹಾರಕ್ಕೆ ಜಾತಿ-ಧರ್ಮಗಳನ್ನು ಗಂಟುಹಾಕುವುದು ತಪ್ಪು ಎಂಬರ್ಥದಲ್ಲಿ ನಾನು ಹೇಳಿದ್ದೇನೆಯೇ ಹೊರತು‌ ಕೊಡವರು ಬೀಪ್ ತಿನ್ನುತ್ತಾರೆ ಎಂದು ನಾನು ಹೇಳಿಲ್ಲ.
ಕೊಡವ ಸಂಸ್ಕೃತಿ ಬಗ್ಗೆ ನನಗೆ ಅಪಾರವಾದ ಗೌರವ ಇದೆ. ಅದಕ್ಕೆ ಅಪಾರ್ಥ ಕಲ್ಪಿಸುವುದು ಬೇಡ ಎಂದು ಅವರು ತಿಳಿಸಿದ್ದಾರೆ