ಚಾಮುಂಡೇಶ್ವರಿ ದರ್ಶನ ಪಡೆದ ಸಚಿವರು

ಮೈಸೂರು,ನ.20:- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪನವರು ಇಂದು ಮೈಸೂರಿಗೆ ಭೇಟಿ ನೀಡಿದರು.
ಮೈಸೂರಿಗೆ ಭೇಟಿ ನೀಡಿದ ಅವರು ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ತಾಯಿ ಚಾಮುಂಡೇಶ್ವರಿಯ ಪ್ರಧಾನ ಅರ್ಚಕರಾದ ಡಾ.ಶಶಿಶೇಖರ್ ದೀಕ್ಷಿತ್ ಅವರು ಸಚಿವರಿಗೆ ತಿಲಕವಿಟ್ಟು ಗೌರವಿಸಿದರು.
ಈ ಸಂದರ್ಭ ರಾಜ್ಯ ಓ.ಬಿ.ಸಿ.ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು,ನಗರ ಓ.ಬಿ.ಸಿ.ಅಧ್ಯಕ್ಷರಾದ ಜೋಗಿಮಂಜು, ಚಾಮುಂಡೇಶ್ವರಿ ನಗರ ಮಂಡಲ ಅಧ್ಯಕ್ಷರಾದ ಬಿ.ಎಂ.ರಘು,ನಗರ ಪಾಲಿಕೆ ಸದಸ್ಯರಾದ ಕೆ.ಜೆ.ರಮೇಶ್, ಮಾಜಿ ನಗರಪಾಲಿಕೆ ಸದಸ್ಯರಾದ ಶಿವಕುಮಾರ್,ಉಮೇಶ್, ರಾಜೇಶ್, ವರುಣ ಮಹೇಶ್, ಚಂದ್ರು, ಸ್ಥಳೀಯ ಹಿರಿಯ ಮುಖಂಡರುಗಳು ಭಾಗವಹಿಸಿದ್ದರು.