ಚಾರಣಕ್ಕೆ ತೆರಳಿದ್ದ ಹುಬ್ಬಳ್ಳಿ ಮೂಲದ ದಂಪತಿ ಸಾವು


ಹುಬ್ಬಳ್ಳಿ, ಜೂ 7: ಉತ್ತರಾಖಂಡಕ್ಕೆ ಚಾರಣಕ್ಕೆ ತೆರಳಿದ್ದ ಹುಬ್ಬಳ್ಳಿ ಮೂಲದ ದಂಪತಿ ಹವಾಮಾನ ವೈಪರಿತ್ಯದಿಂದ ದುರಂತ ಅಂತ್ಯ ಕಂಡಿದ್ದಾರೆ.
ಉತ್ತರಾಖಂಡಕ್ಕೆ ಚಾರಣಕ್ಕೆ ಹೋದ ಕರ್ನಾಟಕದ 22 ಜನರ ಪೈಕಿ 9 ಜನ ಅಸುನೀಗಿದ್ದು, ಹುಬ್ಬಳ್ಳಿಯ ಉಣಕಲ್ ಮೂಲದ ವಿನಾಯಕ ಮುಂಗರವಾಡಿ ಹಾಗೂ ಸುಜಾತಾ ಮುಂಗರವಾಡಿ ಕೊನೆಯುಸಿರೆಳೆದಿದ್ದಾರೆ. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.
ಈ ದಂಪತಿ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಓದಿದ್ದರು. ವಿನಾಯಕ ಅವರದು 1991ನೇ ಬ್ಯಾಚ್ ಹಾಗೂ ಸುಜಾತಾ ಅವರದು 1994ನೇ ಬ್ಯಾಚ್. ಇವರು ಸದ್ಯ ಬೆಂಗಳೂರಿನಲ್ಲಿ ಉದ್ಯೋಗಿಗಳಾಗಿದ್ದರು. ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಲೇ `ಉತ್ತರ ಕರ್ನಾಟಕ ಸ್ನೇಹಲೋಕ ಟ್ರಸ್ಟ್’ ಎಂಬ ಸಂಸ್ಥೆಯ ಟ್ರಸ್ಟಿ ಕೂಡ ಆಗಿದ್ದು, ಜನರ ಸೇವೆಯಲ್ಲಿ ತೊಡಗಿದ್ದರು.