ಚಾ.ನಗರದಲ್ಲಿ ಭಾರಿ ಮಳೆ ಜನಜೀವನ ಅಸ್ತವ್ಯಸ್ತ

ಚಾಮರಾಜನಗರ, ಆ.04:- ನಗರದಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ನಗರದ ಪ್ರಮುಖ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ನೆರೆ ಬಂದಂತೆ ಚರಂಡಿಗಳು ತುಂಬಿ ರಸ್ತೆಯ ಮೇಲೆಯೇ ಹರಿಯುತ್ತಿದ್ದು,ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಿದೆ.
ತಗ್ಗು ಪ್ರದೇಶದ ಬಡಾವಣೆಯ ಮನೆಗಳಿಗೆ ನೀರು ನುಗ್ಗಿ ಮನೆಯಿಂದ ನೀರು ಸಾಗಿಸಲು ಹರಸಾಹಸ ಪಡುತ್ತಿದ್ದಾರೆ.
ಬೆಳ್ಳಂಬೆಳಿಗ್ಗೆ ಭಾರಿ ಮಳೆ ಉಂಟಾಗಿರುವುದರಿಂದ ಶಾಲಾ ಕಾಲೇಜುಗಳಿಗೆ ಹಾಗೂ ಕಛೇರಿಗಳಿಗೆ ತೆರಳಲು ತುಂಬಾ ತೊಂದರೆ ಉಂಟಾಗಿ ವಿದ್ಯಾರ್ಥಿಗಳು ಹಾಗೂ ನೌಕರರು ಪರಿತಪಿಸುವಂತಾಗಿದೆ.
ನಗರದಲ್ಲಿ ಅಧಿಕಾರಿಗಳಿಂದ ಅವೈಜ್ಞಾನಿಕ ರಸ್ತೆ ಹಾಗೂ ಚರಂಡಿಗಳನ್ನು ನಿರ್ಮಾಣ ಮಾಡಿರುವುದರಿಂದ ಈ ಅವ್ಯವಸ್ಥೆ ಉಂಟಾಗಿದೆ.