ಚಾ.ನಗರದಲ್ಲಿ ಶಾಲಾ-ಕಾಲೇಜು ಆರಂಭ

ಚಾಮರಾಜನಗರ, ಜ.01- ಇಂದಿನಿಂದ ಪಿ.ಯು.ಸಿ. ಹಾಗೂ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳು ಪ್ರಾರಂಭಗೊಂಡಿದ್ದು, ನಗರದ ಜೆ.ಎಸ್.ಎಸ್. ಕಾಲೇಜು, ಶಂಕರಪುರದಲ್ಲಿರುವ ಸೇವಾ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ವಿದ್ಯಾರ್ಥಿಗಳು ಕೊರೊನಾ ಸುರಕ್ಷತಾ ಕ್ರಮಗಳೊಂದಿಗೆ ತರಗತಿಗಳಿಗೆ ಹಾಜರಾದರು.
ಕಾಲೇಜು ಪ್ರವೇಶಕ್ಕೂ ಮುನ್ನಾ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್ ಮಾಡಿ ನಂತರ ಮಾಸ್ಕ್, ಸಾಮಾಜಿಕ ಅಂತರ ಹಾಗೂ ಸ್ಯಾನಿಟೈಸರ್ ನೀಡಿ ಬರ ಮಾಡಿಕೊಳ್ಳಲಾಯಿತು.
ಸೇವಾಭಾರತಿ ಕಾಲೇಜಿನ ಪ್ರಾಂಶುಪಾಲ ಲೋಕೇಶ್ ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಕೊರೊನಾ ಸುರಕ್ಷಾ ಕ್ರಮಗಳನ್ನು ಕಾಲೇಜಿನಲ್ಲಿ ಅನುಸರಿಸಲಾಗುತ್ತಿದ್ದು, ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯಗೊಳಿಸಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಹೆಚ್ಚಿನ ಕಾಳಜಿಯಿಂದ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.