ಚಾ. ನಗರ ಮೈಸೂರು ಜಿಲ್ಲಾಧಿಕಾರಿ ಕಚೇರಿ ದಾಖಲೆಗಳ ಜಪ್ತಿಗೆ ಹೈಕೋರ್ಟ್ ಸೂಚನೆ


ಬೆಂಗಳೂರು,ಮೇ.೫-ಮಹತ್ವದ ಬೆಳವಣಿಗೆಯೊಂದರಲ್ಲಿ ಚಾಮರಾಜನಗರ, ಮೈಸೂರು ಆಸ್ಪತ್ರೆ,ಜಿಲ್ಲಾಧಿಕಾರಿ ಕಚೇರಿಗಳ ದಾಖಲೆಗಳನ್ನು ಜಪ್ತಿ ಮಾಡುವಂತೆ ಹೈಕೋರ್ಟ್ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದೆ.
ಅಕ್ಸಿಜನ್ ಸಿಗದೇ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಬರೋಬ್ಬರಿ ೨೫ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವುದನದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ಸರ್ಕಾರಕ್ಕೆ ಚಾಟಿ ಬೀಸಿ, ಚಾಮರಾಜನಗರ, ಮೈಸೂರು ಆಸ್ಪತ್ರೆ, ಡಿಸಿ ಕಚೇರಿಗಳ ದಾಖಲೆಗಳನ್ನು ಜಪ್ತಿ ಮಾಡುವಂತೆ ಆದೇಶ ನೀಡಿದೆ.
ಇದೇ ವೇಳೆ ಪ್ರಕರಣಕ್ಕೆ ಸಂಬಂಧ ತನಿಖಾಧಿಕಾರಿ ಮಾತ್ರ ದಾಖಲೆಗಳನ್ನು ಪರಿಶೀಲನೆ ಮಾಡಬಹುದಾಗಿದೆ ಎಂದು ಹೇಳಿದೆ. ಇದಲ್ಲದೇ ಅಕ್ಸಿಜನ್‌ಗೆ ಸಂಬಂಧಪಟ್ಟಂತೆ ಕೂಡ ದಾಖಲೆಗಳನ್ನು ಸೀಜ್ ಮಾಡುವಂತೆ ಆದೇಶ ಹೊರಡಿಸಿದೆ.
ನ್ಯಾಯಾಂಗ ತನಿಖೆ:
ಈ ನಡುವೆ ನಿನ್ನೆ ಚಾಮರಾಜನಗರದ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ೨೫ ಕೋವಿಡ್ ಸೋಂಕಿತ ರೋಗಿಗಳು ಸಾವನ್ನಪ್ಪಿದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವ ಕುರಿತು ತನ್ನ ನಿಲುವು ತಿಳಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಕೋವಿಡ್ ಸೋಂಕು ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ಹಾಗೂ ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ತೀವ್ರ ಕಳವಳ:
ಈ ವೇಳೆ, ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ೨೪ ಕೋವಿಡ್ ಸೋಂಕಿತ ರೋಗಿಗಳು ಮೇ ೨ರ ರಾತ್ರಿ ಸಾವನ್ನಪ್ಪಿದ ಘಟನೆ ಬಗ್ಗೆ ಮಾಧ್ಯಮಗಳ ವರದಿ ಪ್ರಸ್ತಾಪಿಸಿದ ಪೀಠ ತೀವ್ರ ಕಳವಳ ವ್ಯಕ್ತಪಡಿಸಿತು.
ಜತೆಗೆ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಅದಕ್ಕೆ ಕಾರಣಗಳು ಏನೆಂದು ಅಡ್ವೊಕೇಟ್ ಜನರಲ್ ಅವರಿಗೆ ಪ್ರಶ್ನಿಸಿತು.
ಇದಕ್ಕೆ ಉತ್ತರಿಸಿದ ಎಜಿ ಪ್ರಭುಲಿಂಗ ನಾವದಗಿ ರೋಗಿಗಗಳು ಸಾವನ್ನಪ್ಪಿರುವುದು ನಿಜ. ಆದರೆ, ಆ?ಯಕ್ಸಿಜನ್ ಕೊರತೆಯಿಂದಲೇ ರೋಗಿಗಳು ಸಾವನ್ನಪ್ಪಿದರಾ ಎಂಬ ಬಗ್ಗೆ ನಿಖರವಾಗಿ ಯಾವುದೇ ಮಾಹಿತಿ ಇಲ್ಲ. ಹೀಗಾಗಿ ದುರ್ಘಟನೆಗೆ ಕಾರಣಗಳು ಏನೆಂದು ತಿಳಿಯಲು ಹಿರಿಯ ಐಎಎಸ್ ಅಧಿಕಾರಿಯೊಬ್ಬರನ್ನು ನೇಮಿಸಲಾಗಿದೆ. ಬುಧವಾರ ಸಂಜೆಯೊಳಗೆ ಈ ಬಗ್ಗೆ ವರದಿ ಸಿಗುವ ನಿರೀಕ್ಷೆ ಇದೆ. ಘಟನೆಗೆ ಯಾರೇ ಕಾರಣರಾಗಿದ್ದರೂ ಅವರ ವಿರುದ್ಧ ಮುಲಾಜಿಲ್ಲದೇ ಕ್ರಮ ಜರುಗಿಸಲು ರಾಜ್ಯ ಸರ್ಕಾರ ಸಿದ್ದವಿದೆ ಎಂದು ಭರವಸೆ ನೀಡಿದರು.
ಸಮನ್ವಯಕ್ಕೆ ಸೂಚನೆ:
ವಾದ ಆಲಿಸಿದ ಪೀಠ, ರೋಗಿಗಳು ಆ?ಯಕ್ಸಿಜನ್ ಇಲ್ಲದೇ ಸಾವನ್ನಪ್ಪಿರುವುದು ಅತ್ಯಂತ ಘೋರ ವಿಚಾರ. ಹಾಗೆಯೇ ನ್ಯಾಯಾಂಗ ತನಿಖೆಗೆ ಒಪ್ಪಿಸುವುದಕ್ಕೆ ಅರ್ಹ ಪ್ರಕರಣವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ನಿಲುವು ತಿಳಿಸಬೇಕು ಮತ್ತು ಘಟನೆಯ ತನಿಖಾ ವರದಿಯನ್ನು ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು.
ಇದಕ್ಕೂ ಮುನ್ನ ಆ?ಯಕ್ಸಿಜನ್? ಕೊರತೆಯಾಗದಂತೆ ನೆರೆಹೊರೆ ಜಿಲ್ಲೆಗಳಲ್ಲಿ ಸಮನ್ವಯ ಸಾಧಿಸುವಂತೆ ಸರ್ಕಾರಕ್ಕೆ ಸೂಚಿಸಿತು.