ಚಿಂಚೋಳಿ: ಅಕ್ರಮ ಗಣಿಗಾರಿಗೆ ತಡೆಯಲು ಮನವಿ

ಚಿಂಚೋಳಿ,ಆ.29- ತಾಲೂಕಿನಲ್ಲಿ ಪರವಾನಿಗೆ ಪಡೆಯದೇ ಕೆಲವರು ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ತಾಲೂಕ ಅಧ್ಯಕ್ಷರಾದ ಸಂತೋಷ್ ಗುತ್ತೇದಾರ್ ಅವರು ಸೇಡಂನ ಸಾಹಾಯಕ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಈ ಕುರಿತು ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಚಿಂಚೋಳಿ ತಾಲೂಕಿನ ಕಲ್ಲೂರ್ ರೋಡ್ ಮತ್ತು ಮಿರಿಯಾಣ ಸೇರಿದಂತೆ ಕೆಲ ಕಡೆ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು ತಾಲೂಕಿನ ಸಂಬಂಧಪಟ್ಟ ಅಧಿಕಾರಿಗಳು ಕಣ್ಮುಚ್ಚಿ ಕುಳಿತುಕೊಂಡಿದ್ದಾರೆ ಹಾಗೂ ಜೆಸ್ಕಾಂ ಇಲಾಖೆಯವರು, ಪರವಾನಿಗೆ ಇಲ್ಲದೇ ವಿದ್ಯುತ್ ಸಂಪರ್ಕವನ್ನು ಅಕ್ರಮವಾಗಿ ನೀಡಿದ್ದಾರೆ ಹೀಗಾಗಿ ಇಲ್ಲಿ ಅಕ್ರಮ ಗಡಿಗಾರಿಕೆ ನಡೆಸುತ್ತಿದ್ದಾರೆ ಕಾಟಾಚಾರಕ್ಕೆ ಜೆಸ್ಕಾಂ ಇಲಾಖೆಯವರು ಮೂರ್ ನಾಲ್ಕು ಟಿಸಿ ಗಳನ್ನು ತಂದು ಅಕ್ರಮ ಗಣಿಗಾರಿಕೆಯನ್ನು ಬಂದ್ ಮಾಡಿವೆ ಎಂದು ಹೇಳುತ್ತಿದ್ದಾರೆ ಆದರೆ ಈಗಲೂ ಸಹಿತ ಅಕ್ರಮ ಗಣಿಗಾರಿಕೆ ನಡೆದಿದೆ ಕೂಡಲೇ ಅಕ್ರಮ ಗಣಿಗಾರಿಕೆಯನ್ನು ಬಂದ್ ಮಾಡಬೇಕೆಂದು ಒಂದು ವೇಳೆ ಸಂಬಂಧಪಟ್ಟ ಅಧಿಕಾರಿಗಳು ಅಕ್ರಮ ಗಣಿಗಾರಿಕೆ ಬಂದ್ ಮಾಡದಿದ್ದರೆ ಮುಂಬರುವ ದಿನಗಳಲ್ಲಿ ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರು ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ ಆ ಸಂದರ್ಭದಲ್ಲಿ ಕೂಡ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ದೂರು ನೀಡಿ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಪತ್ರ ಸಲ್ಲಿಸುತ್ತೇನೆ ಎಂದು ಸಂತೋಷ್ ಗುತ್ತೇದಾರ್, ಹೇಳಿದರು.