ಚಿಂಚೋಳಿ ಜನತಾದರ್ಶನಾ: ಮಳಿಗೆಗೆ ಚಾಲನೆ ನೀಡಿದ ಸಚಿವರು

ಚಿಂಚೋಳಿ,ಸೆ.26- ತಾಲೂಕ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜನತಾ ದರ್ಶನ ಹಾಗೂ ಜನ ಸ್ಪಂದನ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಳಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ ಖರ್ಗೆ, ಅವರು ರಿಬ್ಬಿನ ಕತ್ತರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಡಾ. ಅವಿನಾಶ ಜಾಧವ, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ್, ಮತ್ತು ಅನೇಕ ಜಿಲ್ಲೆಯ ಅಧಿಕಾರಿಗಳು ಹಾಗೂ ಚಿಂಚೋಳಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಾದ ಗುರುಪ್ರಸಾದ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು