ಚಿಂಚೋಳಿ ತಾಲೂಕಿನಲ್ಲಿ ಸಂಭ್ರಮದ ರಂಜಾನ್

ಚಿಂಚೋಳಿ,ಏ.12: ಚಿಂಚೋಳಿ ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಮುಸ್ಲಿಂ ಸಮುದಾಯದಿಂದ ರಂಜಾನ್ ಅನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ರಂಜಾನ್ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ಉಪವಾಸ ವ್ರತ ಮಾಡಿದ್ದ ಮುಸ್ಲಿಂಮರು ಬೆಳಗ್ಗೆ ಹೊಸ ಬಟ್ಟೆ ಧರಿಸಿ, ನಗರದ ವಿವಿಧ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿದರು. ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ವ್ಯವಸ್ಥೆ ಮಾಡಲಾಗಿತ್ತು ತಮ್ಮ ಮಕ್ಕಳೊಂದಿಗೆ ಈದ್ಗಾ ಮೈದಾನಕ್ಕೆ ಆಗಮಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಬಳಿಕ ಮಧ್ಯಾಹ್ನ ಹಿಂದೂ ಸ್ನೇಹಿತರನ್ನು ಮನೆಗೆ ಆಹ್ವಾನಿಸಿ, ವಿವಿಧ ವಿಶೇಷ ಖಾದ್ಯಗಳಿಂದ ತಯಾರಿಸಿದ ಊಟ ಉಣಬಡಿಸಿದರು. ಇದೇ ವೇಳೆ ಹಿಂದೂ-ಮುಸ್ಲಿಮರು ರಂಜಾನ್ ಹಬ್ಬದ ಶುಭಾಶಯ ವಿನಿಮಯ ಮಾಡಿದರು.