ಚಿಕಿತ್ಸೆಗೆ ವಸತಿ ದಾಖಲಾತಿ ಅವಶ್ಯವಲ್ಲ -ಸುಪ್ರೀಂ

ನವದೆಹಲಿ.ಮೇ ವಸತಿ ದಾಖಲೆಗಳನ್ನು ಸಲ್ಲಿಸದಿದ ರೋಗಿಯನ್ನು ಆಸ್ಪತ್ರೆಗೆ ಸೇರಿಸುವುದು ಅಥವಾ ಅಗತ್ಯ ಔಷಧಿಗಳನ್ನು ನಿರಾಕರಿಸುವಂತೆ ಇಲ್ಲ ಎಂದು ಉನ್ನತ ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.
ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ಮತ್ತು ನ್ಯಾಯಮೂರ್ತಿ ರವೀಂದ್ರ ಭಟ್ ಅವರನ್ನೊಳಗೊಂಡ ಮೂವರು ಸದಸ್ಯರ ಸುಪ್ರೀಂ ಕೋರ್ಟ್ ಪೀಠವು ಈ ಆದೇಶವನ್ನು ನೀಡಿದೆ.ಇದೇ ವೇಳೆ ನ್ಯಾಯಾಪೀಠ, ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗುವ ಕುರಿತು ಎರಡು ವಾರದೊಳಗೆ ರಾಷ್ಟ್ರೀಯ ನೀತಿ ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶಿಸಿದೆ.
ಇದೇ ವೇಳೆ ಇಂತಹ ಪರಿಸ್ಥಿತಿಯಲ್ಲಿ ಯಾವುದೇ ವ್ಯಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಹಾಯ ಯಾಚಿಸಿದರೆ ಅವರ ವಿರುದ್ಧ ಕ್ರಮಕ್ಕೆ ಮುಂದಾಗುವುದು ದಬ್ಭಾಳಿಕೆಯಾಗಿದೆ ಈ ನಿಟ್ಟಿನಲ್ಲಿ ಈ ಬಗ್ಗೆ ಸೂಕ್ತ ಸೂಚನೆಯನ್ನು ಎಲ್ಲಾ ಮುಖ್ಯ ಕಾರ್ಯದರ್ಶಿಗಳು, ಪೊಲೀಸ್ ಮಹಾನಿರ್ದೇಶಕರು, ಪೊಲೀಸ್ ಆಯುಕ್ತರಿಗೆ ನೀಡಿದೆ. ಯಾವುದೇ ವೇದಿಕೆಯಲ್ಲಿ ಸಹಾಯ ಪಡೆಯುವ / ತಲುಪಿಸುವ ವ್ಯಕ್ತಿಗಳಿಗೆ ಕಿರುಕುಳಗಳನ್ನು ನೀಡಬಾರದು ಅಂತ ತಿಳಿಸಿದೆ.
ಈ ನಡುವೆ ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ದೇಶದಲ್ಲಿ ಕಳೆದ ೨೪ ಗಂಟೆಗಳಲ್ಲಿ ೩,೬೮,೧೪೭ ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ ೨೪ ಗಂಟೆಗಳಲ್ಲಿ ೩,೬೮,೧೪೭ ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ . ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ ೧,೯೯,೨೫,೬೦೪ಕ್ಕೆ ಏರಿಕೆಯಾಗಿದೆ. ಕಳೆದ ೨೪ ಗಂಟೆಗಲ್ಲಿ ೩,೪೧೭ ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮೃತಪಟ್ಟವರ ಸಂಖ್ಯೆ ೨,೧೮,೯೫೯ ಕ್ಕೆ ಏರಿಕೆಯಾಗಿದೆ.