ಚಿಕ್ಕಲ್ಲೂರು ಜಾತ್ರೆಯಲ್ಲಿ ಪ್ರಾಣಿ ಬಲಿ ತಡೆಯಲು ದಯಾನಂದಸ್ವಾಮೀಜಿ ಮನವಿ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಜ. 26- ಜಿಲ್ಲೆಯ ಚಿಕ್ಕಲ್ಲೂರು ಶ್ರೀ ಸಿದ್ದಪ್ಪಾಜಿ ಜಾತ್ರೆಯಲ್ಲಿ ಹೈಕೋರ್ಟ್ ಆದೇಶದಂತೆ ಸಂಪೂರ್ಣವಾಗಿ ಪ್ರಾಣಿಬಲಿಯನ್ನು ತೆಡೆಯಲು ಕರ್ನಾಟಕ ಸರ್ಕಾರ, ಚಾಮರಾಜನಗರ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಹಕಾರ ನೀಡಬೇಕು ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಮತ್ತು ಪಶು ಪ್ರಾಣಿಬಲಿ ನಿರ್ಮೂಲನ ಮಹಾಸಂಘದ ಅಧ್ಯಕ್ಷ ದಯಾನಂದಸ್ವಾಮೀಜಿ ಮನವಿ ಮಾಡಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಣಿಬಲಿ ನಿಲ್ಲಿಸಿ ಅಹಿಂಸಾತ್ಮಕ ಸಾತ್ವಿಕ ಪೂಜೆ ಸಲ್ಲಿಸಲು ಭಕ್ತಾಧಿಗಳಲ್ಲಿ ವಿನಂತಿ ಮತ್ತು ಪ್ರಾಣಿಬಲಿ ತಡೆ ಜಾಗೃತಿಗಾಗಿ ಇಂದಿನಿಂದ ಜಾತ್ರೆ ಮುಗಿಯುವವರೆಗೂ ನಡೆಯಲಿರುವ ಅಹಿಂಸಾ-ಪ್ರಾಣಿದಯಾ-ಆಧ್ಯಾತ್ಮ ಸಂದೇಶ ಯಾತ್ರೆÀಯನ್ನು ಕೈಗೊಂಡಿರುವುದಾಗಿ ತಿಳಿಸಿದರು.ಇಂದಿನಿಂದ ಒಂದು ವಾರಗಳ À ಕಾಲ ಹಾಗೂ ಇನ್ನಿತರ ದಿನಗಳಲ್ಲಿ ನಡೆಯಲಿರುವ ಚಾಮರಾಜ ನಗರ ಜಿಲ್ಲೆ, ಕೊಳ್ಳೇಗಾಲ ತಾಲೂಕಿನ ಶ್ರೀ ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆಯಲ್ಲಿ ಹೊಸಮಠ ಹಳೇಮಠ, ದೇವಾಲಯದ ಮುಂಭಾಗ, ಹಿಂಭಾಗ ಸುತ್ತಮುತ್ತಲಿನ ಪರಿಸರ ಹಾಗೂ ರಸ್ತೆಯ ಇಕ್ಕೆಲಗಳಲ್ಲಿ, ಹೊರವಲಯ ಮತ್ತು ಸಾರ್ವಜನಿಕ ಸ್ಥಳ, ಧಾರ್ಮಿಕ ಸಮಾವೇಶದಲ್ಲಿ ಯಾವುದೇ ಪ್ರಾಣಿಗಳ ಬಲಿ ನಡೆಯದಂತೆ ಹಾಗೂ ಪ್ರಾಣಿ ಅಂಗಾಗಗಳ ನೈವೇದ್ಯ ಸಲ್ಲಿಕೆ/ಪ್ರದರ್ಶನ ಇತ್ಯಾದಿ ಕಾನೂನು ಬಾಹಿರ ಕೃತ್ಯಗಳು ಜರುಗದಂತೆ 1959ರ ಕರ್ನಾಟಕ ಪ್ರಾಣಿಬಲಿಗಳ ಪ್ರತಿಬಂಧಕ ಅಧಿನಿಯಮ ಹಾಗೂ 1963 ನಿಯಮಗಳು ಮತ್ತು 1975 ರ ತಿದ್ದುಪಡಿ ಕಾಯ್ದೆಯÀ ಪ್ರಕಾರ ಮತ್ತು ರಾಜ್ಯ ಹೈಕೋರ್ಟ್ ಆದೇಶದಂತೆ ಕಟ್ಟುನಿಟ್ಟಿನ/ ವ್ಯಾಪಕ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಪ್ರಾಣಿಬಲಿಯನ್ನು ಸಂಪೂರ್ಣವಾಗಿ ತಡೆಯಬೇಕು ಎಂದು ದಯಾನಂದ ಸ್ವಾಮೀಜಿ ಒತ್ತಾಯಿಸಿದರು. ಈ ಕುರಿತು ಈಗಾಗಲೇ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಗೃಹ ಮತ್ತು ಪಶು ಸಂಗೋಪನಾ ಇಲಾಖೆ ಕಾರ್ಯದರ್ಶಿಗಳು, ರಾಜ್ಯ ಪೆÇಲೀಸ್ ಮಹಾ ನಿರ್ದೇಶಕರು, ಹಾಗೂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೆÇಲೀಸ್ ವರಿ?À್ಠಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಮನವಿಗೆ ಸ್ಪಂದಿಸಿರುವ ಜಿಲ್ಲಾಡಳಿ ಮತ್ತು ಪೊಲೀಸ್ ಇಲಾಖೆ ಪ್ರಾಣಿಬಲಿ ತಡೆಗೆ ವ್ಯಾಪಕ ಪ್ರಚಾರ ಮತ್ತು ಬಂದೋಬಸ್ತು ಮಾಡಿಕೊಂಡಿದ್ದು ತುಂಬಾ ಅಭಿನಂದನಾರ್ಹ. ಈ ದಿಸೆಯಲ್ಲಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದು ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ.
ಅಹಿಂಸಾ ಪ್ರಾಣಿ ದಯಾ ಆಧ್ಯಾತ್ಮ ಸಂದೇಶ ಯಾತ್ರೆ: ಈ ಕುರಿತು ಜನತೆಯಲ್ಲಿ ಜಾಗೃತಿ ಮೂಡಿಸಲು ಇಂದಿನಿಂದ ಒಂದು ವಾರಗಳ ಕಾಲ ಚಾಮರಾಜನಗರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಹಾಗೂ ಚಿಕ್ಕಲ್ಲೂರಿನ ಶ್ರೀ ಸಿದ್ದಪ್ಪಾಜಿ ಜಾತ್ರಾ ಪರಿಸರ ಮತ್ತು ಸುತ್ತ ಮುತ್ತಲಿನ ಊರುಗಳಲ್ಲಿ ಸ್ವಾಮೀಜಿಯವರು ಮತ್ತು ಅವರ ತಂಡ ಅಹಿಂಸಾ ಪ್ರಾಣಿದಯಾ ಆಧ್ಯಾತ್ಮ ಸಂದೇಶಯಾತ್ರೆಯನ್ನು ಕೈಗೊಳ್ಳುವುದಾಗಿ ತಿಳಿಸಿದರು.