
ಚಾಮರಾಜನಗರ, ಏ. 08- ಸೇವಾ ಭಾರತಿ ಟ್ರಸ್ಟ್ ಚಾಮರಾಜನಗರ ಮತ್ತು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಮೈಸೂರು ಇವರ ಸಹಯೋಗದಲ್ಲಿ ಸಮೀಪದ ರಾಮಸಮುದ್ರದ ಸೇವಾ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತವಾಗಿ ವಾಕ್ ಮತ್ತು ಶ್ರವಣ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.
ಶಾಲೆಯ ಅವರಣದಲ್ಲಿ ನಡೆದ ಶಿಬಿರವನ್ನು ಸೇವಾ ಭಾರತಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಎಸ್. ರಮೇಶ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮನುಷ್ಯನಿಗೆ ಆರೋಗ್ಯ ಬಹಳ ಮುಖ್ಯವಾದದ್ದು ಅದರಲ್ಲೂ ಶ್ರವಣದೋಷದ ಬಗ್ಗೆ ಜಾಗೃತಿ ಮೂಡಿಸುವುದು ನಮ್ಮೆಲ್ಲರ ಕರ್ತವ್ಯ ಆಗಿದೆ ಎಂದರು.
ಚಿಕ್ಕವಯಸ್ಸಿನಲ್ಲೇ ಅನೇಕರಿಗೆ ಶ್ರವಣದೋಷಗಳು ಕಂಡುಬರುತ್ತವೆ. ಹಾಗೂ ವಿದ್ಯಾರ್ಥಿಗಳಲ್ಲಿ ಉಚ್ಚಾರಣ ದೋಷಗಳನ್ನು ಗುರುತಿಸಿ ಸರಿಪಡಿಸಿಕೊಳ್ಳಲು ಈ ಶಿಬಿರವು ಸಹಕಾರಿಯಾಗುತ್ತದೆ. ಪೆÇೀಷಕರು ತಮ್ಮ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಬೇಕು. ಸೇವಾ ಭಾರತಿ ಟ್ರಸ್ಟ್ ಪ್ರತಿವರ್ಷ ಈ ರೀತಿಯಾದಂತಹ ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಶಾಲೆಯ ಪೆÇೀಷಕರು ವಿದ್ಯಾರ್ಥಿಗಳು ಶಿಬಿರದ ಸದುಪಯೋಗವನ್ನು ಪಡೆಸಿಕೊಳ್ಳಿ ಎಂದು ತಿಳಿಸಿದರು
ಶಿಬಿರದಲ್ಲಿ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗೆ ತಪಾಸಣೆ ಮಾಡಲಾಯಿತು. ವಾಕ್ ಮತ್ತು ಶ್ರವಣ ದೋಷವುಳ್ಳ ವರನ್ನು ಗುರುತಿಸಿ, ತಜ್ಞ ವೈದ್ಯರು ಸಲಹೆ ಸೂಚನೆಗಳನ್ನು ನೀಡಿದರು.
ಕಾರ್ಯಕ್ರಮದಲ್ಲಿ ಸೇವಾ ಭಾರತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಾಸುದೇವರಾವ್, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಮೈಸೂರಿನ ವೈದ್ಯ ಶರತ್ ಕುಮಾರ್, ವಾಕ್ ಮತ್ತು ಶ್ರವಣ ಸಂಸ್ಥೆಯ ನಿವೃತ್ತ ಉದ್ಯೋಗಿ ಮೈಸೂರಿನ ರಾಜಲಕ್ಷ್ಮಿ ಶಾಲಾ ಮುಖ್ಯ ಶಿಕ್ಷಕÀ ಮಹೇಂದ್ರ ಹೊಮ್ಮ ಉಪಸ್ಥಿತರಿದ್ದರು.