ಚಿಕ್ಕಹರದನಹಳ್ಳಿ ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ

ಮೈಸೂರು, ನ.7: ಮೈಸೂರು ಜಿಲ್ಲೆಯ ಚಿಕ್ಕಹರದನಹಳ್ಳಿ ಗ್ರಾಮದ ಜನತೆಗೆ ಭಯಮೂಡಿಸಿದ್ದ ಚಿರತೆಯೊಂದು ಕೊನೆಗೂ ಬಲೆಗೆ ಬಿದ್ದಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಚಿಕ್ಕಹರದನಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದ್ದು, ರೈತ ಚಂದ್ರಶೇಖರ ಅವರ ಜಮೀನಿನಲ್ಲಿ ಬೋನು ಇರಿಸಲಾಗಿತ್ತು. ಕಳೆದ ಹಲವು ದಿನಗಳಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆ ಗ್ರಾಮಸ್ಥರಲ್ಲಿ ಭೀತಿ ಮೂಡಿಸಿತ್ತು. ಚಿರತೆ ದಾಳಿಯಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ಇದೀಗ ಚಿರತೆ ಸೆರೆಯಾಗಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.