ಚಿಕ್ಕೋಡಿ ಜಿಲ್ಲಾಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಅಸ್ಲಮ್ ನಾಲಬಂದ ನೇಮಕ

ಅಥಣಿ :ಅ.29: ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ ಚಿಕ್ಕೋಡಿ ಪಟ್ಟಣದ ಕಾಂಗ್ರೆಸ್‍ಕಾರ್ಯಾಲಯದಲ್ಲಿ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಸಭೆ ನಡೆಯಿತು ಸಭೆಯಲ್ಲಿ ಅಲ್ಪಸಂಖ್ಯಾತರ ಏಳಿಗೆಗಾಗಿ
ಹಲವಾರು ವಿಷಯಗಳ ಕುರಿತು ಚರ್ಚಿಸಲಾಯಿತು, ಕೆಪಿಸಿಸಿ ಕಾರ್ಯಧಕ್ಷರಾದ ಸತೀಶ ಜಾರಕಿಹೊಳಿ ಅವರ ಆದೇಶದಂತೆ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಅವರ ಮಾರ್ಗದರ್ಶನದಂತೆ ರಾಜ್ಯ ಕೆಪಿಸಿಸಿ ಪದಾಧಿಕಾರಿಗಳ ಸಮ್ಮುಖದಲ್ಲಿ ಅಲ್ಪ ಸಂಖ್ಯಾತರ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಅಸ್ಲಮ್ ನಾಲಬಂದ ಅವರನ್ನು ಚಿಕ್ಕೋಡಿ ಜಿಲ್ಲಾ ಅಲ್ಪಸಂಖ್ಯಾತರ ಘಟಕ ಉಪಾಧ್ಯಕ್ಷರಾಗಿ, ಸೈಯದ್ ಗಡ್ಡೇಕರ ಅವರನ್ನು ಅಥಣಿ ತಾಲೂಕಾ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷರಾಗಿ, ಅಪ್ಪು ಜಮಾದಾರ ಅವರನ್ನು ತೆಲಸಂಗ ಬ್ಲಾಕ್ ಅಧ್ಯಕ್ಷರಾಗಿ, ಹಾರುನರಶೀದ
ಮೋಮಿನ ಅವರನ್ನು ಜಿಲ್ಲಾ ಪ್ರಧಾನಕಾರ್ಯದರ್ಶಿಯಾಗಿ, ಸಿರಾಜ್ ಸನದಿ ಇವರನ್ನು ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಪತ್ರ ನೀಡಲಾಗಿದೆ,
ಆಯ್ಕೆಯಾದರು ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶತಾಯಗತಾಯವಾಗಿ ಪ್ರಯತ್ನಿಸಬೇಕು ಎಂದು ಹೇಳಲಾಗಿದೆ,
ಈ ವೇಳೆ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಬಿ.ಎಂ.ನಾಸಿರಪಾಷಾ, ಹಾಜಿಅಲಿ ಹಿಂಡಸಗೇರಿ ಸೇರಿದಂತೆ ಹಲವರುಕೆಪಿಸಿಸಿ ಪದಾಧಿಕಾರಿಗಳು ಹಾಗೂ
ಕಾರ್ಯಕರ್ತರು ಭಾಗವಹಿಸಿದ್ದರು.