ಚಿಕ್ಕ ಮಕ್ಕಳ ತಜ್ಞ ವೈದ್ಯರಿಗೆ ತರಬೇತಿ ಕಾರ್ಯಾಗಾರ

ಬಾಗಲಕೋಟೆ.ನ.19: ಬಾಗಲಕೋಟೆ ಜಿಲ್ಲೆಯನ್ನು ಕ್ಷಯ ರೋಗ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಶ್ರೀ ಎಮ್ಮಿ ಹೇಳಿದರು.
ನವನಗರದ ಖಾಸಗಿ ಹೋಟೆಲ್‍ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲಣ ಅಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಎನ್‍ಟಿ.ಇ.ಪಿ ಕಾರ್ಯಕ್ರಮದಡಿ ಚಿಕ್ಕ ಮಕ್ಕಳ ಕ್ಷಯರೋಗ ಪ್ರಕರಣಗಳನ್ನು ಸಮರ್ಪಕವಾಗಿ ಪತ್ತೆ ಹಚ್ಚಲು ಇರುವ ಸವಾಲುಗಳು, ಶ್ವಾಸಕೋಶದ ಮತ್ತು ಹೆಚ್ಚುವರಿ ಶ್ವಾಸಕೋಶದ ಮಾದರಿಗಳ ಸಂಗ್ರಹಣೆಯಲ್ಲಿ ತೊಂದರೆಗಳ ಕುರಿತು ಹಮ್ಮಿಕೊಂಡ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಲ್ಲಿ ಪೌಷ್ಠಿಕತೆ ಕೊರತೆಯಿಂದ ಕ್ಷಯರೋಗಕ್ಕೆ ತುತ್ತಾಗುತ್ತಿದ್ದಾರೆ. ಜಿಲ್ಲೆಯಲ್ಲಿ ಶೇ.30 ರಷ್ಟು ಜನ ಕ್ಷಯರೋಗ ಪ್ರಕರಣಗಳು ಇದ್ದು, ಹೆಚ್ಚಾಗಿ ಮಕ್ಕಳಲ್ಲಿ ಕಂಡುಬರುತ್ತಿದೆ. ಕ್ಷಯರೋಗವನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಶ್ವಾಸಕೋಶಗಳ ಮಾದರಿ ಸಂಗ್ರಹಿಸುವಲ್ಲಿ ಉಂಟಾಗುವ ತೊಂದರೆ ನಿವಾರಣಗೆ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಸರಕಾರಿ ಹಾಗೂ ಖಾಸಗಿ ಚಿಕ್ಕಮಕ್ಕಳ ತಜ್ಞರು ತರಬೇತಿಯ ಸದುಪಯೋಗವನ್ನು ಪಡೆದುಕೊಂಡು ಮಾದರಿ ಸಂಗ್ರಹಿಸಿ ಪತ್ತೆ ಹಚ್ಚಿದಲ್ಲಿ ಈ ಕ್ಷಯ ರೋಗವನ್ನು ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲಣಾಧಿಕಾರಿ ಸುವರ್ಣ ಕುಲಕರ್ಣಿ, ಮಕ್ಕಳ ತಜ್ಞರಾದ ಡಾ.ಸುಜಾತಾ ಪಾಟೀಲ, ಡಾ.ಅಶೋಕ ಬಡಕಲಿ, ಡಾ.ರಮೇಶ ಪೋಳ ಮತ್ತಿತರರು ಉಪಸ್ಥಿತರಿದ್ದರು.