ಚಿಕ್ಕ ವಯಸ್ಸಿಗೆ ಮದುವೆ ಮಾಡುವುದು ಅಪರಾಧ

ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಮೇ.30: ಪ್ರೌಢಾವಸ್ಥೆಯನ್ನು ತಲುಪದ ಮಕ್ಕಳನ್ನು ಚಿಕ್ಕ ವಯಸ್ಸಿನಲ್ಲಿಯೇ ಮದುವೆ ಮಾಡುವುದು ಅಪರಾಧವಾಗಿದ್ದು ಈ ಬಗ್ಗೆ ಪಾಲಕರು ಎಚ್ಚರಿಕೆಯಿಂದ ಇರಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅರುಣ್ ಕುಮಾರ್ ತಿಳಿಸಿದರು.
ಅವರು ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ ಇದರ ಪರಿಣಾಮಗಳು ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕುರಿತ ಜಾಥಾ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಿ ಮಾತನಾಡಿದರು.
ಹಿಂದೂ ವಿವಾಹ ಕಾಯಿದೆಯ ಅನುಸಾರ ಹೆಣ್ಣಿಗೆ 18 ವರ್ಷ ಹಾಗೂ ಗಂಡಿಗೆ 21 ವರ್ಷ ತುಂಬದೇ ಮಕ್ಕಳನ್ನು ವಿವಾಹ ಮಾಡುವುದು ಕಾನೂನಿನ ಪ್ರಕಾರ ಅಪರಾಧವಾಗಿದ್ದು ಈ ಬಗ್ಗೆ ಪೆÇೀಷಕರು ಜಾಗೃತರಾಗಬೇಕು 15-17 ವಯಸ್ಸಿನಲ್ಲಿ ಮಕ್ಕಳನ್ನು ವಿವಾಹ ಮಾಡುವುದರಿಂದ ಮಹಿಳೆಯರು ಅನೇಕ ರೀತಿಯ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಅಲ್ಲದೇ ಮಕ್ಕಳನ್ನು ಪಡೆಯಲು ಹರಸಾಹಸ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ. ಅಂಥಹ ಹೆಣ್ಣುಮಕ್ಕಳು 20 ವರ್ಷ ತುಂಬುವ ಮೊದಲೇ ನಾನಾ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಪ್ರಾಪ್ತ ವಯಸ್ಸಿನ ತಾಯ್ತನವು ತಾಯಿ ಹಾಗೂ ಮಗುವನ್ನು ಅಪಾಯದ ಅಂಚಿಗೆ ತಳ್ಳುತ್ತದೆ. ಅಲ್ಲದೇ ಹೆಚ್ಚಿನ ಪ್ರಮಾಣದ ಶಿಶುಮರಣ, ತಾಯಂದಿರ ಮರಣ ಉಂಟಾಗಲಿವೆ. ಬಾಲ್ಯವಿವಾಹ ಮಾಡುವ ಪೆÇೀಷಕರಿಗೂ ಕಾನೂನಿನಲ್ಲಿ ಶಿಕ್ಷೆಗೆ ಗುರಿಪಡಿಸಲು ಅವಕಾಶವಿದ್ದು ಈ ಬಗ್ಗೆ ಪೆÇೀಷಕರು ಜಾಗೃತರಾಗಬೇಕು.
ಬಾಲ್ಯ ವಿವಾಹ ಪರಿಣಾಮದಿಂದಾಗಿ ಮಕ್ಕಳಿಗೂ ಒಬ್ಬ ಪರಿಪೂರ್ಣ ಮತ್ತು ಸಮಗ್ರ ವ್ಯಕ್ತಿಯಾಗಿ ಬೆಳೆಯುವ ಹಕ್ಕು ಇದೆ. ಮಕ್ಕಳ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಎಳೆಯ ಮಕ್ಕಳಿಗೆ ವಯಸ್ಸಿಗೆ ಮೀರಿದ ಜವಾಬ್ದಾರಿ ಹೊರಿಸಿದಂತಾಗುತ್ತದೆ. ಅಪ್ರಾಪ್ತ ವಯಸ್ಸಿನಲ್ಲಿ ಗರ್ಭೀಣಿಯಾಗುವುದರಿಂದ ಗರ್ಭಕೋಶದ ಬೆಳವಣಿಗೆ ಆಗದೇ ಮಗು ಮತ್ತು ತಾಯಿ ಮರಣಕ್ಕೆ ತುತ್ತಾಗುವ ಸಂಭವ ಹೆಚ್ಚಾಗಿರುತ್ತದೆ. ವಿಕಲಾಂಗ ಮಕ್ಕಳು ಜನಿಸುವ ಸಾಧ್ಯತೆಯಿದೆ. ಲೈಂಗಿಕ ದೌರ್ಜನ್ಯಕ್ಕೆ ಹಾಗೂ ಬಲಾತ್ಕಾರಕ್ಕೆ ಒಳಗಾಗುತ್ತಾರೆ. ರಕ್ತಹೀನತೆ ಉಂಟಾಗಿ ಕಡಿಮೆ ತೂಕದ ಮಗು ಜನಿಸುವ ಸಾದ್ಯತೆ ಹೆಚ್ಚಿರುತ್ತದೆ.
ಬಾಲ್ಯವಿವಾಹ ಸಾಬೀತಾದಲ್ಲಿ ನ್ಯಾಯಾಲಯವು ಆರೋಪಿಗಳಿಗೆ ಎರಡು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂಪಾಯಿಗಳ ದಂಡವನ್ನು ವಿಧಿಸುತ್ತದೆ. ಭಾರತಕ್ಕೆ ಮಾರಕವಾಗಿರುವ ಬಾಲ್ಯವಿವಾಹವನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ಅದಕ್ಕಾಗಿ ಎಲ್ಲರೂ ಸುಶಿಕ್ಷಿತರಾಗಬೇಕು. ಕಾನೂನಿನ ಅರಿವುಳ್ಳವರಾಗಿರಬೇಕು. ಆ ಮೂಲಕ ತಾವೆಲ್ಲರೂ ನಾಗರೀಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದು ಸಿಡಿಪಿಓ ಅರುಣ್ ಕುಮಾರ್ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಮೇಲ್ವಿಚಾರಕಿಯರಾದ ಜ್ಯೋತಿಲಕ್ಷ್ಮಿ, ಪದ್ಮಮ್ಮ, ಶಾಂತವ್ವ, ರೂಪ, ಪಾರ್ವತಮ್ಮ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.