ಚಿಗಟೇರಿ ಆಸ್ಪತ್ರೆಗೆ ಡಿ.ಸಿ.ಶಿಶಾನಂದ ಕಾಪಶಿ ಭೇಟಿ, ಟ್ರಾಮಾಕೇರ್ ಸೆಂಟರ್ ಪರಿಶೀಲನೆ.

ದಾವಣಗೆರೆ.ಮೇ.29; ಜಿಲ್ಲಾಧಿಕಾರಿ ಶಿವಾನಂದ ಕಾಪಶಿ  ಚಿಗಟೇರಿ ಆಸ್ಪತ್ರೆಗೆ ಭೇಟಿ ನೀಡಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸುತ್ತಿರುವ ಟ್ರಾಮಾ ಕೇರ್ ಸೆಂಟರ್ ಕಾಮಗಾರಿ ವೀಕ್ಷಣೆ ಮಾಡಿ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಅವಕಾಶವಾಗಬೇಕೆಂದು ತಿಳಿಸಿ ಇಲ್ಲಿ ತುರ್ತು ಚಿಕಿತ್ಸಾ ಸಂದರ್ಭದಲ್ಲಿ ಅಗತ್ಯವಾಗಿ ಬೇಕಾಗುವ ಸೌಲಭ್ಯಗಳ ಪರಿಶೀಲನೆ ನಡೆಸುವಂತೆ ಜಿಲ್ಲಾ ಸರ್ಜನ್ ಗೆ ತಿಳಿಸಿದರು.ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ವೀಕ್ಷಣೆ. ಈಗಾಗಲೇ 100 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಾಣವಾಗಿದ್ದು ಹೆಚ್ಚುವರಿಯಾಗಿ ಇನ್ನು 100 ಹಾಸಿಗೆ ಕಟ್ಟಡ ಕಾಮಗಾರಿಗೆ ಚಾಲನೆ ನೀಡಲಾಗಿದ್ದು ಅದರ ಕಾಮಗಾರಿಯು ಆರಂಭವಾಗಿದ್ದು ಗುಣಮಟ್ಟ ಹಾಗೂ ನಿಗದಿತ ಸಮಯದಲ್ಲಿ ಕಾಮಗಾರಿ ಮುಕ್ತಾಯ ಮಾಡಲು ತಿಳಿಸಿದರು. ಹಳೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ   ಭೇಟಿ. ಹಳೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿನ ರೋಗಿಗಳೊಂದಿಗೆ ಮಾತನಾಡಿ ಚಿಕಿತ್ಸಾ ಸೌಲಭ್ಯಗಳ ಮಾಹಿತಿ ಪಡೆದರು. ಈ ವೇಳೆ ಜಿಲ್ಲಾ ಸರ್ಜನ್ ಡಾ.ಸುಭಾಶ್ಚಂದ್ರ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.