ಚಿಗುರು ಕಾರ್ಯಕ್ರಮಕ್ಕೆ ನಟ ಪ್ರೇಮ್ ಚಾಲನೆ

ಕೆ.ಆರ್.ಪುರ ನ.೨೮-ಮಕ್ಕಳಲ್ಲಿನ ಪ್ರತಿಭೆ ಗುರುತಿಸುವ ಪ್ರೋತ್ಸಾಹಿಸುವ ಕಾರ್ಯ ಮಾಡುತ್ತಿರುವ ಕೇಂಬ್ರಿಡ್ಜ್ ಕಾಲೇಜಿನ ಕಾರ್ಯ ಶ್ಲಾಘನೀಯ ಎಂದು ನಟ ಪ್ರೇಮ್ ಅವರು ತಿಳಿಸಿದರು.
ಕೆಆರ್‌ಪುರದ ಕೇಂಬ್ರಿಡ್ಜ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಚಿಗುರು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಚಿಗುರು ಕಾರ್ಯಕ್ರಮ ಪ್ರತೀ ವರ್ಷ ವಿಜೃಂಭಣೆಯ ಕಳೆ ಕಟ್ಟುತ್ತಿದೆ. ರಾಜ್ಯಮಟ್ಟದಲ್ಲಿ ಈ ಕಾರ್ಯಕ್ರಮ ಹೆಸರು ಮಾಡಿದೆ ಎಂದು ಹೇಳಿದರು.
ಕೇಂಬ್ರಿಡ್ಜ್ ಕಾಲೇಜಿನ ಅಧ್ಯಕ್ಷ ಡಿ.ಕೆ.ಮೋಹನ್ ಅವರು ಮಾತನಾಡಿ
ಚಿಗುರು ಕಾರ್ಯಕ್ರಮದಲ್ಲಿ ಅಂತರ್ ಕಾಲೇಜು ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗುತ್ತದೆ, ಈ ಬಾರಿ ಸುಮಾರು ೬೬ ಕಾಲೇಜುಗಳಿಂದ ವಿವಿಧ ಪ್ರತಿಬೆಗಳು ಭಾಗವಹಿಸಿದ್ದಾರೆ. ಎರಡು ದಿನದ ಈ ಕಾರ್ಯಕ್ರಮದಲ್ಲಿ ಸುಮಾರು ೨೫ ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು ಎಂದು ಹೇಳಿದರು.
ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ವಿದ್ಯಾರ್ಥಿಯಲ್ಲಿನ ಪ್ರತಿಭೆ ಹೊರತರಲು ಈ ವೇದಿಕೆ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.
ವಿದ್ಯಾಭ್ಯಾಸದ ಜೊತೆಗೆ ಕ್ರೀಡೆ, ಸಾಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸುವಂತೆ ಮಕ್ಕಳಿಗೆ ಪೋಷಕರೂ ಸಹ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.
ಕೇಂಬ್ರಿಡ್ಜ್ ಕಾಲೇಜಿನಲ್ಲಿ ವಿದ್ಯೆಗೆ, ಕ್ರೀಡೆಗೆ, ಸಾಂಸ್ಕೃತಿಕ ಚಟುವಟಿಕೆಗೆ ಎಲ್ಲಾದಕ್ಕೂ ಭಾಗವಹಿಸಲು ಉತ್ತಮ ವಾತಾವರಣ ಕಲ್ಪಿಸಿಕೊಡಲಾಗಿದೆ ಎಂದು ಹೇಳಿದರು.
ಇತರೆ ಕಾಲೇಜುಗಳಿಂದ ಬಂದ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಸಹಕಾರ ಕೊಟ್ಟು ಪ್ರತಿಭೆಗೆ ಪ್ರೋತ್ಸಾಹ ನೀಡಿ ವಿಜೇತರಾದವರಿಗೆ ಬಹುಮಾನ ನೀಡಲಾಗಿದೆ ಎಂದು ಹೇಳಿದರು.
ಸಂಗೀತ ನಿರ್ದೇಶಕ ಗುರುಕಿರಣ್ ಅವರು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ನಟ ಪ್ರೇಮ್,ನಟಿ ಮೇಘ ಶೆಟ್ಟಿ, ಕೇಂಬ್ರಿಡ್ಜ್ ಸಿಇಒ ನಿತೀನ್ ಮೋಹನ್, ಪ್ರಾಂಶುಪಾಲರಾದ ಡಾ.ಜಿ.ಇಂದುಮತಿ ಉಪಸ್ಥಿತರಿದ್ದರು.